Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಫಲವಾದ ನಲಿ – ಕಲಿ : ವರದಿಯಲ್ಲಿ ಏನಿದೆ..?

---Advertisement---

ಮಕ್ಕಳನ್ನ ಆಕ್ಟೀವ್ ಇಟ್ಟುಕೊಳ್ಳಬೇಕು ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಆಗಾಗ ಹೊಸ ಹೊಸ ಯೋಜನೆಗಳನ್ನ ಕಾರ್ಯರೂಪಕ್ಕೆ ತರ್ತಾ ಇರುತ್ತೆ. ಹಾಗೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವೂ ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ 1-3ನೇ ತರಗತಿಯವರೆಗೆ ನಲಿ ಕಲಿ ಯೋಜನೆಯನ್ನು ಜಾರಿ ಮಾಡಿದೆ. ಆದರೆ ಅದರ ಉದ್ದೇಶ ಈಗ ವಿಫಲವಾಗಿದೆ. ಈ ಸಂಬಂಧ ವರದಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲ್ಲಿಸಲಾಗಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದಲ್ಲಿ ವರದಿಯನ್ನು ಮಧು ಬಂಗಾರಪ್ಪ ಅವರಿಗೆ ಸಲ್ಲಿಸಲಾಗಿದೆ. 1990 ರ ಆನಂತರ ತೀವ್ರವಾಗಿ ಕಾಣಿಸಿಕೊಂಡ ಜಾಗತೀಕರಣವೂ ಇದೀಗ ಕರ್ನಾಟಕದ ಶಿಕ್ಷಣ ಪದ್ಧತಿಯ ಮೇಲೆ ನಿರ್ಣಾಯಕ ಪರಿಣಾಮ ಬೀರುತ್ತಿದೆ. ಮಾರುಕಟ್ಟೆ ಕೇಂದ್ರಿತವಾದ ಜಾಗತೀಕರಣವೂ ರಾಷ್ಟ್ರಗಳು, ವ್ಯವಹಾರಗಳು ಮತ್ತು ವ್ಯಕ್ತಿಗಳು ಸಂಪರ್ಕ ಸಾಧಿಸುವ ವಿಧಾನವನ್ನು ಸಂಪೂರ್ಣವಾಗಿ ಬದಲಾಯಿಸುವುದರ ಜೊತೆಗೆ ಜಾಗತಿಕ ಮಟ್ಟದಲ್ಲಿ ಆರ್ಥಿಕ, ಸಾಂಸ್ಕೃತಿಕ ಮತ್ತು ತಾಂತ್ರಿಕ ಏಕೀಕರಣವನ್ನು ಬೆಳೆಸಿದೆ.

ಈ ಬಗೆಯ ಬೆಳವಣಿಗೆಗಳು ಭಾಷೆಗಳ ನಾಶ, ಸಣ್ಣ ಸಮುದಾಯಗಳ ಪತನ, ಪರಿಸರ ನಾಶ ಮತ್ತು ಆರ್ಥಿಕ ಅಸಮಾನತೆಗಳಂತಹ ಭೀಕರ ಸವಾಲುಗಳನ್ನು ನಮ್ಮ ಮುಂದಿಟ್ಟಿದೆ. ಇಂಥ ಸಂದರ್ಭದಲ್ಲಿ ಕನ್ನಡದಂಥ ಭಾಷೆಯೊಂದನ್ನ ಮಕ್ಕಳಿಗೆ ಕಲಿಸುವುದು ಹೇಗೆ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿತ್ತು. ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವೂ ಬಗೆ ಬಗೆಯ ಯೋಜನೆಗಳನ್ನು ಕಾಲ ಕಾಲಕ್ಕೆ ಅನುಷ್ಠಾನಕ್ಕೆ ತಂದಿದೆ. ಅದರಲ್ಲಿ ನಲಿ ಕಲಿ ಯೋಜನೆಯೂ ಒಂದು. 1995-96ನೇ ಸಾಲಿನಲ್ಲಿ ಮೈಸೂರಿನ ಹೆಗ್ಗಡದೇವನ ಕೋಟೆಯಲ್ಲಿ ಪ್ರಾಯೋಗಿಕವಾಗಿ ಆರಂಭಗೊಂಡ ಈ ಯೋಜನೆಯು 2010-11ಕ್ಕೆ ರಾಜ್ಯದ ಎಲ್ಲಾ ಸರ್ಕಾರ ಕನ್ನಡ ಮಾಧ್ಯಮ ಶಾಲೆಗಳಿಗೆ ವಿಸ್ತರಣೆಗೊಂಡಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...