Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿ ವೇತನ ಕುರಿತು ವಾಟ್ಸ್ಪ್‌ನಲ್ಲಿ ತಪ್ಪು ಸಂದೇಶ ಹರಿದಾಟ : ಮೋಸ ಹೋಗದಿರುಲು ಕೋರಿಕೆ

Facebook
Twitter
Telegram
WhatsApp

ಚಿತ್ರದುರ್ಗ. ಸೆ.24: ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ. 24,000/-ಗಳ ಸ್ಕಾಲರ್ ವಿದ್ದು, ಜನ ಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು ಜನರಲ್ಲಿ ಗೊಂದಲಕ್ಕೀಡು ಮಾಡಿದೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ. ದಕ್ಷಿಣ ಕನ್ನಡ, ಮಂಗಳೂರು ಎಂಬ ಮೊಹರು ಹಾಕಿರುವ ಈ ವಾಟ್ಸಪ್ ಸಂದೇಶ ಜನರ ಪೋನ್‌ಗಳಲ್ಲಿ ಒಂದು ತಿಂಗಳಿನಿಂದ ಹರಿದಾಡುತ್ತಿದೆ. ಈ ಸಂದೇಶವನ್ನು ನೋಡಿದ ಜನ ಪ್ರತಿನಿತ್ಯ ಗ್ರಾಮ ಪಂಚಾಯತ್, ಕಂದಾಯ ಅಧಿಕಾರಿಗಳ ಕಛೇರಿ, ತಾಲ್ಲೂಕು, ಜಿಲ್ಲಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿ ಸೇರಿ ಎಲ್ಲಾ ಕಡೆ ಅಲೆದಾಡುತ್ತಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಛೇರಿಯಲ್ಲಿ ಪ್ರತಿದಿನ ನೂರಾರು ಜನರು ಬಂದು ಯೋಜನೆಯ ಬಗ್ಗೆ ವಿಚಾರಿಸಿ ಅರ್ಜಿ ನೀಡುತ್ತಿರುವುದು ಅಧಿಕಾರಿಗಳಲ್ಲಿ ಚಿಂತೆಗೀಡು ಮಾಡಿದೆ. ಬಹಳಷ್ಟು ಜನರು ದೂರವಾಣಿ ಕರೆ ಮೂಲಕವು ವಿಚಾರಿಸುತ್ತಿದ್ದಾರೆ. ಈ ಸಂದೇಶವನ್ನು ಬಂಡವಾಳ ಮಾಡಿಕೊಂಡಿರುವ ಕೆಲವರು ಅಮಾಯಕ, ಮುಗ್ಧ ಜನರನ್ನು ಸುಲಿಗೆ ಮಾಡಲು ಶುರು ಮಾಡಿದ್ದಾರೆ. ಒಂದೊAದು ಅರ್ಜಿಗೆ ಕನಿಷ್ಠ 5 ರಿಂದ 10 ಸಾವಿರ ರೂಗಳನ್ನು ವಸೂಲಿ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ. ಆದ್ದರಿಂದ ಮೋಸ ಹೋಗದಂತೆ ಎಚ್ಚರಿಕೆಯಿಂದಿರಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪುರಸ್ಕತ ಪ್ರಾಯೋಜಕತ್ವ ಈ ಯೋಜನೆಯನ್ನು 2011ರಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ವ್ಯಾಪ್ತಿಗೆ ತರಲಾಗಿದೆ. ಸಂಕಷ್ಟಕ್ಕೆ ಈಡಾಗುವ ಕುಟುಂಬದಲ್ಲಿನ ಮಗು, ಜೈವಿಕ ಕುಟುಂಬದಲ್ಲೇ ಮುಂದುವರೆಯಲು, ಮಗುವಿನ ಶಿಕ್ಷಣ, ಮಕ್ಕಳು ನಿರ್ಗತಿಕರಾಗುವುದು, ಸಂಕಷ್ಟಕ್ಕೀಡಾಗುವುದು, ಓಡಿಹೋಗುವುದು, ಬಲವಂತದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮುಂತಾದವುಗಳಿAದ ತಡೆಗಟ್ಟುವ ಪ್ರಯತ್ನ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಯೋಜನೆಯ ಪ್ರಕಾರ ಫಲಾನುಭವಿಯಾಗಲು ಕೆಲವು ವಿಶೇಷ ಮಾನದಂಡಗಳಿವೆ. ಇಬ್ಬರೂ ಪೋಷಕರನ್ನು ಕಳೆದುಕೊಂಡ ಮಕ್ಕಳು, ಪೋಷಕರು ಕಾರಾಗೃಹದಲ್ಲಿರುವ ಮಕ್ಕಳು, ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಪಟ್ಟಿರುವವರ ಮಕ್ಕಳು, ಪಿ.ಎಂ ಕೇರ್ ಚಿಲ್ಟನ್ ಯೋಜನೆಯ ಅನುಮೋದಿತ ಮಕ್ಕಳು, ಬಾಲಕಾರ್ಮಿಕ ಸಂತ್ರಸ್ಥರು, ಮಕ್ಕಳ ಕಳ್ಳಸಾಗಾಣಿಕೆಗೆ ಒಳಗಾದ ಮಕ್ಕಳು, ಬಾಲ್ಯವಿವಾಹಕ್ಕೊಳಗಾದ ಮಕ್ಕಳು, ಪೋಕೋ ಸಂತ್ರಸ್ಥ ಮಕ್ಕಳು, ಪೋಷಕರಿಬ್ಬರೂ ಮಾರಾಣಾಂತಿಕ ಕಾಯಿಲೆಗೆ ತುತ್ತಾಗಿರುವವರ ಮಕ್ಕಳು, ಬಾಲಸ್ವರಾಜ್ ಪೋರ್ಟಲ್ ನಲ್ಲಿ ನೊಂದಾಯಿಸಲಾದ ಮಕ್ಕಳು, ಪಾಲನೆ ಮತ್ತು ರಕ್ಷಣೆಗೆ ಅಗತ್ಯವಿರುವ ಪಾಲನಾ ಸಂಸ್ಥೆಯ ಮಕ್ಕಳು ಹಾಗೂ ಇತರೆ ದುಡಿಯುವ ಪೋಷಕರನ್ನು ಕಳೆದುಕೊಂಡ ವಿಧವೆ, ವಿಚ್ಛೇದಿತ ಮತ್ತು ವಿಸ್ತತ ಕುಟುಂಬದ ಮಕ್ಕಳು ಈ ಯೋಜನೆಯ ವ್ಯಾಪ್ತಿಗೆ ಒಳಪಡುವರು. ಅದ್ದರಿಂದ ಸುಳ್ಳು ಸಂದೇಶ ನಂಬದಿರುವAತೆ ಸಾರ್ವಜನಿಕರಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ಯುದ್ಧ : ಶಿಶಿರ್ ಗೆ ಸವಾಲು ಹಾಕಿದ ಚೈತ್ರಾ..!

ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ ಶಿಶಿರ್ ಹಾಗೂ ಚೈತ್ರಾ ಅಣ್ಣ ತಂಗಿಯಂತೆ. ಚೈತ್ರಾ ಕುಗ್ಗಿದಾಗೆಲ್ಲ ಶಿಶಿರ್ ಧೈರ್ಯ ತುಂಬಿದ್ದಾರೆ. ಅದಕ್ಕಾಗಿಯೇ ಬಿಗ್ ಬಾಸ್ ತಂಗಿ ನಿನಗಾಗಿ ಎಂಬ ಫೋಸ್ಟರ್ ಅನ್ನೇ ರಿಲೀಸ್

ಬ್ಯಾಂಕ್‍ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮದಾನ

ಚಿತ್ರದುರ್ಗ. ನ.21: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಪರಿಸ್ಥಿತಿ ಮುಂದುವರೆದರೆ

error: Content is protected !!