ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಗೂ ಜನಪ್ರಿಯ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ದಿಢೀರನೆ ಹರಿದಾಡಿ, ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಫೇಸ್ಬುಕ್ನ ಪಬ್ಲಿಕ್ ಫ್ರೆಂಡ್ಸ್ ಎಂಬ ಪುಟದಲ್ಲಿ ಜೂನ್ 12ರ ಮರಣದ ದಿನಾಂಕ ನಮೂದಿಸಿ, ಶ್ರದ್ಧಾಂಜಲಿ ಪೋಸ್ಟರ್ಗಳನ್ನು ಹರಿಬಿಡಲಾಗಿತ್ತು. ಇದನ್ನು ನಿಜವೆಂದು ನಂಬಿದ ಸಾವಿರಾರು ಅಭಿಮಾನಿಗಳು ಕಣ್ಣೀರಿನ ವಿದಾಯದ ಕಮೆಂಟ್ಗಳನ್ನು ಹಾಕಿದ್ದರು.
ಈ ವದಂತಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ವತಃ ನಟ ದೊಡ್ಡಣ್ಣ ಅವರೇ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಿದ್ದಾರೆ.ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ, ಮನೆಯಲ್ಲಿ ಆರಾಮಾಗಿದ್ದೇನೆ. ನನಗೇನೂ ಆಗಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಇಂತಹ ನಕಲಿ ಮತ್ತು ಬೇಜವಾಬ್ದಾರಿ ಸುದ್ದಿಗಳನ್ನು ಯಾರೂ ನಂಬಬೇಡಿ ಎಂದು ದೊಡ್ಡಣ್ಣ ಮನವಿ ಮಾಡಿದ್ದಾರೆ. ಹಿರಿಯ ನಟನ ಸ್ಪಷ್ಟನೆಯಿಂದಾಗಿ ಅಭಿಮಾನಿಗಳು ಸದ್ಯ ನಿಟ್ಟುಸಿರು ಬಿಟ್ಟಿದ್ದಾರೆ.
ಕೇವಲ ಲೈಕ್ಸ್ ಮತ್ತು ವೀವ್ಸ್ಗಾಗಿ ಬದುಕಿರುವ ವ್ಯಕ್ತಿಯ ಸಾವಿನ ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ನಟ ದೊಡ್ಡಣ್ಣ ಹಾಗೂ ಅವರ ಆಪ್ತ ವಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇಂತಹ ಸುಳ್ಳು ಸುದ್ದಿಗಳು ಕುಟುಂಬಸ್ಥರಿಗೆ ತೀವ್ರ ಮಾನಸಿಕ ಹಿಂಸೆ ನೀಡುತ್ತವೆ ಎಂದು ಕಿಡಿಕಾರಿದ್ದಾರೆ. ಸದ್ಯ, ಸುಳ್ಳು ಸುದ್ದಿ ಹರಡಿದ ಪೇಜ್ ಅಡ್ಮಿನ್ ಹಾಗೂ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚಿತ್ರರಂಗ ಹಾಗೂ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಒತ್ತಾಯಿಸುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















