ಮೇ ತಿಂಗಳ ಬಳಿಕ ಕಾಂಗ್ರೆಸ್ ಸರ್ಕಾರ ಪತನ : ಕುಮಾರಸ್ವಾಮಿ ಪದೇ ಪದೇ ಹೀಗೆ ಹೇಳುತ್ತಿರೋದ್ಯಾಕೆ..?

1 Min Read

 

ಮಂಡ್ಯ: ಮೇ ತಿಂಗಳ ಬಳಿಕ ಅಧಿಕಾರದಲ್ಲಿ ಇರುವ ಕಾಂಗ್ರೆಸ್ ಸರ್ಕಾರ ಉರುಳಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮತ್ತೆ ಪುನರ್ ಉಚ್ಛರಿಸಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಖಂಡಿತಾ ಸರ್ಕಾರ ಪತನವಾಗಲಿದೆ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಕ್ಷೇತ್ರದ ಬೆಳತೂರು ಗ್ರಾಮದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ರಾಜ್ಯದ ಅಭಿವೃದ್ಧಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಹರಸಾಹಸ ಪಡುತ್ತಿದೆ. ಸ್ವಲ್ಪ ದಿನ ಕಾಯಿರಿ‌. ರಾಜ್ಯದ 6.5 ಕೋಟಿ ಜನರ ಕಷ್ಟ ಸುಖವನ್ನು ಅರಿತು ಕೆಲಸ ಮಾಡುವ ಸರ್ಕಾರ ಬರಲಿದೆ. ಜಿಲ್ಲೆಯಿಂದ ಜೆಡಿಎಸ್ ಪಕ್ಷದ ಏಕೈಕ ಶಾಸಕ ಹೆಚ್ ಟಿ ಮಂಜು ಅವರ ಮೇಲೆ ಪ್ರೀತಿ ವಿಶ್ವಾಸವಿಟ್ಟು ಗೆಲ್ಲಿಸಿದವರಿಗೆ ಧನ್ಯವಾದಗಳು ಎಂದಿದ್ದಾರೆ.

ಇವರಿಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಇರುವ ಚಿಂತೆ ಜನಸಾಮಾನ್ಯರ ಸಮಸ್ಯೆಯ ಮೇಲೆ ಇಲ್ಲ. ಹೀಗೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರಿಗೂ ನೀಡುವುದಕ್ಕೆ ಹಣ ಇರುವುದಿಲ್ಲ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಳೆದ ಒಂದು ವಾರದಿಂದಾನೂ ತರಗತಿಗಳನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಇದುವರೆಗೂ ಉನ್ನತ ಶಿಕ್ಷಣ ಸಚಿವರು ಒಂದು ಪ್ರತಿಕ್ರಿಯೆಯನ್ನು ನೀಡಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *