Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸಚಿವರ ವಿರುದ್ಧ ಸುಳ್ಳು ಹೇಳಿಕೆ ಸಹಿಸುವುದಿಲ್ಲ : ಎಸ್.ಆರ್. ತಿಪ್ಪೇಸ್ವಾಮಿ

---Advertisement---

ಹಿರಿಯೂರು : ಸಚಿವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಬಿಟ್ಟು ತಾವು ಕೊಟ್ಟ ಮಾತಿನಂತೆ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಅಜೇಯ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಓಬಿಸಿ ರಾಜ್ಯ ಉಪಾಧ್ಯಕ್ಷ ಶ್ರವಣಗೆರೆ ಎಸ್.ಆರ್. ತಿಪ್ಪೇಸ್ವಾಮಿ ಆಗ್ರಹಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ಹಿಂದುಳಿದ ಸಮುದಾಯಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈಡಿಗ ಸಮುದಾಯದ ಅಜೇಯ್ ಕುಮಾರ್ ಅವರಿಗೆ ಸಚಿವರು ನಗರಸಭೆ ಚುನಾವಣೆಯಲ್ಲಿ ಟಿಕೆಟ್ ಕೊಟ್ಟು, ಬಿ. ಫಾರಂ ನೀಡಿ, ಚುನಾವಣೆಯಲ್ಲಿ ಗೆಲ್ಲಿಸಿಕೊಂಡು, ನಗರಸಭೆ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ರಾಜೀನಾಮೆ ಕೊಡು ಅಂತ ಕೇಳಿದ್ರೆ ಸುಖಾಸುಮ್ಮನೆ ಸಚಿವರ ವಿರುದ್ಧ ಆರೋಪಿಸುವುದು ಬಿಡಬೇಕು. ಆರೋಪ ಮಾಡಿ ಎದುರಿಸಿಬಿಟ್ರೆ ರಾಜೀನಾಮೆ ಕೇಳಲ್ಲ ಎಂಬುದು ನಿಮ್ಮ ಮೂರ್ಖತನ, ನೀವು ಕನಸಿನಲ್ಲೂ ಅಧ್ಯಕ್ಷರಾಗಿರುತ್ತೇನೆಂದು ಊಹಿಸಿರಲಿಲ್ಲ. ಸಚಿವರ ಉದಾರ ಮನಸ್ಸಿನಿಂದ ನೀವು ಅಧಿಕಾರ ಪಡೆಯುವಂತಾಗಿದೆ. ಈಗೆ ನಿಮ್ಮ ಮಾತುಗಳು ಮುಂದುವರಿದರೆ ನಿಮ್ಮ ರಾಜಕೀಯ ಇಲ್ಲಿಗೆ ಅಂತ್ಯವಾಗಲಿದೆ. ಇವೆಲ್ಲವನ್ನೂ ಬಿಟ್ಟು ರಾಜೀನಾಮೆ ನೀಡಿ ಸಚಿವರ ಬಳಿ ಹೋಗಿ ಕ್ಷಮೆ ಕೇಳಿ ಇರುವ ಗೌರವವನ್ನು ಉಳಿಸಿಕೊಳ್ಳಿ ಎಂದು ತಿಳಿಸಿದರು.

ನಿಮ್ಮಿಂದ ಸಚಿವರಿಗೆ ಏನಾಗಬೇಕಿಲ್ಲ. ತಾಲೂಕಿನ ಮತದಾರರು, ಸಾವಿರಾರು ಕಾರ್ಯಕರ್ತರು ಅಭಿಮಾನಿಗಳು ಸಚಿವರ ಜೋತೆಗಿದ್ದಿವಿ. ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳ್ಳಿಸಿ ರಾಜೀನಾಮೆ ನೀಡುತ್ತೇನೆ ಎನ್ನುವುದು ಬೇಡ, ಮೊದಲು ರಾಜೀನಾಮೆ ಕೊಡಿ, ಉಳಿದವರಿಗೆ ಅವಕಾಶ ಕಲ್ಪಿಸಿ, ಸಾಮಾಜಿಕ ನ್ಯಾಯದ ಅಡಿಯಲ್ಲಿ ಪ್ರತಿಯೊಬ್ಬರಿಗೂ ನ್ಯಾಯ ಸಿಗಬೇಕು ಎಂಬುದು ಕಾಂಗ್ರೆಸ್ ಪಕ್ಷದ ಸಿದ್ಧಾಂತವಾಗಿದೆ. ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿರುವ ಸಚಿವರು ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಿದ್ದಾರೆ ಮೊದಲು ನೀವು ರಾಜೀನಾಮೆ ನೀಡಬೇಕು ಎಂದು ಎಸ್.ಆರ್. ತಿಪ್ಪೇಸ್ವಾಮಿ ಒತ್ತಾಯಿಸಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...