ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಾರಿ ಸಿದ್ದರಾಮಯ್ಯ ಅವರ ದಾರಿಯನ್ನೆ ಹಿಡಿಯುತ್ತಾರೆ ಎನ್ನಲಾಗಿತ್ತು. ಸುಲಭವಾಗಿ ಗೆಲ್ಲುವ ಕನಕಪುರವನ್ನು ಕುಟುಂಬಸ್ಥರಿಗೆ ಬಿಟ್ಟು, ಮದ್ದೂರಿನಲ್ಲಿ ನಿಲ್ಲುತ್ತಾರೆ ಎಂಬ ಮಾತಿತ್ತು. ಈ ವಿಚಾರ ಚರ್ಚೆಗೆ ಬರುತ್ತಿದ್ದಂತೆ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮದ್ದೂರು, ಮಂಡ್ಯದವರು ಬನ್ನಿ ಬನ್ನಿ ಅಂತ ಕರೆಯುತ್ತಾ ಇದ್ದಾರೆ. ಆದರೆ ನಾನು ಕನಕಪುರ ಬಿಟ್ಟು ಎಲ್ಲೂ ಹೋಗಲ್ಲ. ಕನಕಪುರದಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಕುಟುಂಬಸ್ಥರಿಗೆ ಕನಕಪುರ ಬಿಟ್ಟುಕೊಡುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನನ್ನ ಕುಟುಂಬಸ್ಥರು ಯಾರು ರಾಜಕಾರಣಕ್ಕೆ ಬರುವುದಿಲ್ಲ. ನಾನು ರಾಜಕಾರಣದಲ್ಲಿ ಇರುವ ತನಕ ಕುಟುಂಬಸ್ಥರು ರಾಜಕಾರಣಕ್ಕೆ ಬರುವುದಕ್ಕೆ ಬಿಡುವುದಿಲ್ಲ. ನಾನು ಕನಕಪುರದಲ್ಲೇ ಸ್ಪರ್ಧೆ ಮಾಡುತ್ತೀನಿ ಅಂತ ಸ್ಪಷ್ಟನೆ ನೀಡಿದ್ದಾರೆ.