Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಆತ್ಮೀಯತೆಗೆ ಫ್ಯಾನ್ಸ್ ದಿಲ್ ಖುಷ್..!

---Advertisement---

 

ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಕಾದಾಟ ಇದೆ ಎಂಬುದು ಗುಟ್ಟಿನ ವಿಚಾರವೇನು ಅಲ್ಲ‌. ಈ ಬಾರಿ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆಯೇ ಸಿಎಂ ಖರ್ಚಿಗೆ ಸ್ಪರ್ಧೆ ಇದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಇತ್ತು ಎಂದೇ ಚರ್ಚೆಯಾಗುತ್ತಾ ಇತ್ತು. ಇದು ಚುನಾವಣೆಗೆ ತೊಂದರೆಯಾಗಬಾರದು, ಜನರಿಗೆ ತಪ್ಪು ಸಂದೇಶ ರವಾನೆಯಾಗಬಾರದು ಎಂಬುದನ್ನು ಹೈಕಮಾಂಡ್ ಸೂಚಿಸಿತ್ತು. ಹೀಗಾಗಿ ಇಬ್ಬರು ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ಒಟ್ಟಾಗಿ‌ ಕಾಣಿಸಿಕೊಳ್ಳುತ್ತಿದ್ದಾರೆ.

ಸದ್ಯ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಾಂಧವ್ಯದ ಫೋಟೋಗಳು ವೈರಲ್ ಆಗುತ್ತಿವೆ. ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿ, ಆತ್ಮೀಯತೆಯಿಂದ ಮಾತನಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಪಕ್ಷದ ಬ್ಯಾಡ್ಜ್ ಹಾಕದೆ ಇರುವುದನ್ನು ಡಿಕೆಶಿ ಗಮನಿಸಿದ್ದಾರೆ. ತಕ್ಷಣ ಅವರ ಜೇಬಿಗೆ ಕೈ ಹಾಕಿ ಬ್ಯಾಡ್ಜ್ ತೆಗೆದು ಹಾಕಿದ್ದಾರೆ.

ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಯಾವಾಗಲೂ ಇದೇ ಹೊಂದಾಣಿಕೆಯಲ್ಲಿರಿ ಅಂತಿದ್ದಾರೆ. ಖುಷಿ ಕೂಡ ಆಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಹೇಗಾದರೂ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...