ಕಾಂಗ್ರೆಸ್ ನಲ್ಲಿ ಸಿಎಂ ಖುರ್ಚಿಗಾಗಿ ಕಾದಾಟ ಇದೆ ಎಂಬುದು ಗುಟ್ಟಿನ ವಿಚಾರವೇನು ಅಲ್ಲ. ಈ ಬಾರಿ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆಯೇ ಸಿಎಂ ಖರ್ಚಿಗೆ ಸ್ಪರ್ಧೆ ಇದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ವೈಮನಸ್ಸು ಇತ್ತು ಎಂದೇ ಚರ್ಚೆಯಾಗುತ್ತಾ ಇತ್ತು. ಇದು ಚುನಾವಣೆಗೆ ತೊಂದರೆಯಾಗಬಾರದು, ಜನರಿಗೆ ತಪ್ಪು ಸಂದೇಶ ರವಾನೆಯಾಗಬಾರದು ಎಂಬುದನ್ನು ಹೈಕಮಾಂಡ್ ಸೂಚಿಸಿತ್ತು. ಹೀಗಾಗಿ ಇಬ್ಬರು ನಾಯಕರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲಾ ಕಡೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ಸದ್ಯ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಾಂಧವ್ಯದ ಫೋಟೋಗಳು ವೈರಲ್ ಆಗುತ್ತಿವೆ. ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈ ಹಾಕಿ, ಆತ್ಮೀಯತೆಯಿಂದ ಮಾತನಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರು ಪಕ್ಷದ ಬ್ಯಾಡ್ಜ್ ಹಾಕದೆ ಇರುವುದನ್ನು ಡಿಕೆಶಿ ಗಮನಿಸಿದ್ದಾರೆ. ತಕ್ಷಣ ಅವರ ಜೇಬಿಗೆ ಕೈ ಹಾಕಿ ಬ್ಯಾಡ್ಜ್ ತೆಗೆದು ಹಾಕಿದ್ದಾರೆ.
ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು ಯಾವಾಗಲೂ ಇದೇ ಹೊಂದಾಣಿಕೆಯಲ್ಲಿರಿ ಅಂತಿದ್ದಾರೆ. ಖುಷಿ ಕೂಡ ಆಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಹೇಗಾದರೂ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…