ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.07 : ಧಾರವಾಡಕ್ಕೆ ವರ್ಗವಾಗಿರುವ ಜಿಲ್ಲಾಧಿಕಾರಿ ಜಿ.ಆರ್.ಜಿ.ದಿವ್ಯಪ್ರಭು ಅವರಿಗೆ ಬೀಳ್ಕೊಡುಗೆ ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿ ಜಿ.ವೆಂಕಟೇಶ ಅವರಿಗೆ ಸ್ವಾಗತ ಸಮಾರಂಭವನ್ನು ಚಿತ್ರದುರ್ಗ ನಾಗರೀಕ ವೇದಿಕೆ ವತಿಯಿಂದ ನಗರದಲ್ಲಿ ಫೆಬ್ರವರಿ 09ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ 5 ಗಂಟೆಗೆ ತರಾಸು ರಂಗಮಂದಿರದಲ್ಲಿ ಸಮಾರಂಭವನ್ನು ಆಯೋಜಿಸಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಚ್.ಆಂಜನೇಯ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ ಮೀನಾ, ಜಿಲ್ಲಾ ಪಂಚಾಯತ್ ಸಿಇಒ ಸೋಮಶೇಖರ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಯುಕ್ತೆ ವಿ.ವಿ.ಜೋತ್ಸ್ನಾ, ಮರ್ಚೆಂಟ್ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀಕಾಂತರೆಡ್ಡಿ ಪಾಲ್ಗೊಳ್ಳಲಿದ್ದಾರೆ.
ಕಾಂಗ್ರೆಸ್ ಹಿರಿಯ ಮುಖಂಡ ಡಾ.ಎಚ್.ಎ.ಷಣ್ಮುಖಪ್ಪ, ಹಿರಿಯ ವಕೀಲ ಫಾತ್ಯರಾಜನ್, ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಉಪಸ್ಥಿತಿ ಇರಲಿದ್ದು
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಂಘಟನೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರಾದ ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜು, ಡಾ. ಸೌಮ್ಯಾ ಮಂಜುನಾಥ್ ಮನವಿ ಮಾಡಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…