Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕೋಪಯೋಗಿ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ರೀಮತಿ ದಯಾ ಪುತ್ತೂರ್ ಕರ್ ಅವರಿಗೆ ಬೀಳ್ಕೊಡುಗೆ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಲೋಕೋಪಯೋಗಿ ಇಲಾಖೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ವಯೋ ನಿವೃತ್ತಿಯಾದ ದಯಾ ಪುತ್ತೂರ್ಕರ್ ಗೆ ಬೀಳ್ಕೊಡುಗೆ ನೀಡಲಾಯಿತು.

ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್ ಮಾತನಾಡಿ ದಯಾ ಪುತ್ತೂರು ಕರ್ ರವರ ಕರ್ತವ್ಯ ಪ್ರಜ್ಞೆ, ನಿಷ್ಠೆ, ಪ್ರಾಮಾಣಿಕತೆ, ಬದ್ದತೆ, ಸರಳತೆಯಿತ್ತು. ಹಾಗಾಗಿ ಕಚೇರಿಯಲ್ಲಿ ಎಲ್ಲಾ ಸಿಬ್ಬಂದಿಗಳಿಗೆ ಅಚ್ಚುಮೆಚ್ಚಿನವರಾಗಿದ್ದರು ಎಂದು ಗುಣಗಾನ ಮಾಡಿದರು.

ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಜಿ.ಕೃಷ್ಣಪ್ಪ ಮಾತನಾಡಿ ವಿವಿಧ ಇಲಾಖೆಗಳಲ್ಲಿ ತುರ್ತು ಕೆಲಸವಿದ್ದಾಗ ದಯಾ ಪುತ್ತೂರ್ಕರ್‍ಗೆ ಜವಾಬ್ದಾರಿಯನ್ನು ವಹಿಸುತ್ತಿದ್ದೆವು. ಆಗ ಅವರು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿ ಕೆಲಸದ ಬಗ್ಗೆ ತಮಗಿದ್ದ ಕಾಳಜಿಯನ್ನು ಪ್ರದರ್ಶಿಸುತ್ತಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಲೆಕ್ಕಪರಿಶೋಧನಾಧಿಕಾರಿ ಹೆಚ್.ಶಿವಕುಮಾರ್ ಮಾತನಾಡಿ ದಯಾ ಪುತ್ತೂರ್ಕರ್ ತಮ್ಮ ಕರ್ತವ್ಯದ ಅವಧಿಯಲ್ಲಿ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.

ಮ್ಯಾನೇಜರ್ ಮಹಮದ್ ಸಾದತ್, ನಾಗವೇಣಿ, ಜಯಂತ್‍ರೆಡ್ಡಿ, ಕಲ್ಪನಾ, ಚಂದ್ರಪ್ಪ, ಬಸವರಾಜ್, ಗೌಸ್, ಶಾನ್ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ಶ್ರೀಮತಿ ರೇಣುಕ ಪ್ರಕಾಶ್, ಜಯಪ್ರಕಾಶ್, ಶ್ರೀಮತಿ ಜಯ ಪ್ರಾಣೇಶ್, ಶೋಭ ಮಲ್ಲಿಕಾರ್ಜುನ್, ಡಾ.ಚಾಂದಿನಿ ಖಲೀದ್, ಪೂಜ, ಅಜೆಯ್, ಜಯದೇವಮೂರ್ತಿ, ಮಹೇಶ್ವರಿ, ಶೈಲ, ದೀಪಿಕ ಇನ್ನು ಮುಂತಾದವರು ಹಾಜರಿದ್ದು ದಯಾ ಪುತ್ತೂರ್ಕರ್‍ರವರಿಗೆ ನಿವೃತ್ತ ಜೀವನ ಸುಖಕರವಾಗಿರಲೆಂದು ಶುಭ ಹಾರೈಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...