Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಸೆಂಬರ್ 09 ರಂದು ರೈತ ನಾಯಕ ಟಿ.ನುಲೇನೂರು ಎಂ.ಶಂಕರಪ್ಪ ನುಡಿನಮನ ಕಾರ್ಯಕ್ರಮ

---Advertisement---

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

 

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.06 : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜಿಲ್ಲಾ ನೀರಾವರಿ ಅನುಷ್ಟಾನ ಹೋರಾಟ ಸಮಿತಿ ವತಿಯಿಂದ ಹೋರಾಟಗಾರ ಟಿ.ನುಲೇನೂರು ಎಂ.ಶಂಕರಪ್ಪನವರಿಗೆ ಡಿ.9 ರಂದು ಬೆಳಿಗ್ಗೆ 11-30 ಕ್ಕೆ ತ.ರಾ.ಸು.ರಂಗಮಂದಿರದಲ್ಲಿ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ನುಡಿ ನಮನ ಉದ್ಗಾಟಿಸುವರು.

ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.
ಕಮಲಮ್ಮ ನುಲೇನೂರು ಶಂಕರಪ್ಪ ಉಪಸ್ಥಿತರಿರುವರು.

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕಿಸಾನ್‍ಸಭಾ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ, ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸರ್ವೋದಯ ಕರ್ನಾಟಕ ಅಧ್ಯಕ್ಷ ಚಾಮರಸ ಪಾಟೀಲ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ ಇವರುಗಳು ನುಡಿ ನಮನದಲ್ಲಿ ಭಾಗವಹಿಸಲಿದ್ದಾರೆ.

ಪ್ರಗತಿಪರ ಚಿಂತಕ ಜೆ.ಯಾದವರೆಡ್ಡಿ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಟಿ.ನುಲೇನೂರು ಎಂ.ಶಂಕರಪ್ಪನವರ ಅಭಿಮಾನಿಗಳು, ಹೋರಾಟ ಮನೋಭಾವದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ವಿನಂತಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment