Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುಂಗಾರು ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ

Facebook
Twitter
Telegram
WhatsApp

ಹಾವೇರಿ,(ಜೂ.13):  ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ 2022-23 ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಿದೆ.

ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “ಪೂರ್ವ ಮುಂಗಾರು ರೈತರ ಬೆಳೆ ಸಮೀಕ್ಷೆ 2022-23” ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್‍ಲೋಡ್ ಮಾಡಬಹುದಾಗಿರುತ್ತದೆ ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅವರು ತಿಳಿಸಿದ್ದಾರೆ.

ಈ ಮಾಹಿತಿಯನ್ನು ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು, ಅಳವಡಿಸಲು ಬಳಸಲಾಗುತ್ತದೆ. ಆದ್ದರಿಂದ ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!