ಹಾವೇರಿ,(ಜೂ.13): ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ 2022-23 ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಿದೆ.
ರೈತರು ಗೂಗಲ್ ಪ್ಲೇಸ್ಟೋರ್ನಿಂದ “ಪೂರ್ವ ಮುಂಗಾರು ರೈತರ ಬೆಳೆ ಸಮೀಕ್ಷೆ 2022-23” ಆ್ಯಪ್ ಡೌನ್ಲೋಡ್ ಮಾಡಿಕೊಂಡು ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ಅಪ್ಲೋಡ್ ಮಾಡಬಹುದಾಗಿರುತ್ತದೆ ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅವರು ತಿಳಿಸಿದ್ದಾರೆ.
ಈ ಮಾಹಿತಿಯನ್ನು ಬೆಳೆವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ ಯೋಜನೆಯಡಿ ಸವಲತ್ತುಗಳನ್ನು ಒದಗಿಸಲು, ಅಳವಡಿಸಲು ಬಳಸಲಾಗುತ್ತದೆ. ಆದ್ದರಿಂದ ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಬೆಳೆ ಸಮೀಕ್ಷೆಯಲ್ಲಿ ಪಾಲ್ಗೊಂಡು ತಮ್ಮ ಜಮೀನಿನ ಬೆಳೆ ಮಾಹಿತಿಯನ್ನು ರೈತರು ತಾವೇ ಖುದ್ದಾಗಿ ದಾಖಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಆಯಾ ಗ್ರಾಮಗಳಿಗೆ ನಿಯೋಜಿಸಿದ ಖಾಸಗಿ ನಿವಾಸಿಗಳ ಸಹಾಯದೊಂದಿಗೆ ಬೆಳೆ ಮಾಹಿತಿಯನ್ನು ದಾಖಲಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…