Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಳೆ ಹಾನಿಗೆ ಮಧ್ಯಂತರ ಪರಿಹಾರಕ್ಕಾಗಿ ರೈತರ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 17 : ರೈತರ ಬೆಳೆ ಹಾನಿಗೆ ಮಧ್ಯಂತರ ಪರಿಹಾರಕ್ಕಾಗಿ ಬೆಳೆ ವಿಮೆ ಓರಿಯಂಟಲ್ ಇನ್ಸುರೆನ್ಸ್ ಕಂಪನಿಗೆ ಜಿಲ್ಲಾಧಿಕಾರಿಗಳು ಕಟ್ಟಪ್ಪಣೆ ಮಾಡುವಂತೆ ಚಳ್ಳಕೆರೆ ತಾಲ್ಲೂಕು ಕಸಬಾ ಹೋಬಳಿ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘದ ಅಧ್ಯಕ್ಷ ಡಾ.ಸಿ.ಶಿವಲಿಂಗಪ್ಪ ಮನವಿ ಮಾಡಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2025-26 ನೇ ಸಾಲಿನ ತೊಗರಿ ಬೆಳೆ ಮಧ್ಯಂತರ ಪರಿಹಾರಕ್ಕಾಗಿ ರೈತರ ನೆರವಿಗೆ ಬರಬೇಕು. ಕಂದಾಯ, ಕೃಷಿ, ತೋಟಗಾರಿಕೆ, ಇನ್ಸ್‍ರೆನ್ಸ್ ಕಂಪನಿಯವರು ಅ.3 ರಂದು ಚಳ್ಳಕೆರೆಯಲ್ಲಿ ರೈತ ಮುಖಂಡರ ಸಭೆ ನಡೆಸಿ ಐದು ವಾರ ಮಳೆ ಬಂದಿಲ್ಲ. ಮಧ್ಯಂತರ ಪರಿಹಾರ ನೀಡಲು ಅವಕಾಶವಿದೆಯೆಂದು ತೀರ್ಮಾನಿಸಿದ್ದನ್ನು ಬಿಟ್ಟರೆ ಇದುವರೆವಿಗೂ ಮಧ್ಯಂತರ ಪರಿಹಾರ ಸಿಕ್ಕಿಲ್ಲ. ನಂತರ ಸಭೆ ಕರೆದು ಜಂಟಿ ಸಮೀಕ್ಷೆ ನಡೆಸಿ ಎಂದು ಕೃಷಿಗೆ ಸಂಬಂಧಿಸಿದ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರೆ ವಿನಃ ಯಾವ ಉಪಯೋಗವೂ ಆಗಿಲ್ಲ ಎಂದು ಆಪಾದಿಸಿದರು.

ಚಳ್ಳಕೆರೆಯಲ್ಲಿ ನಡೆದ ಸಭೆಯನ್ನು ಹೊರತುಪಡಿಸಿದರೆ ಬೆಳೆ ವಿಮೆ ಓರಿಯಂಟಲ್ ಇನ್ಸುರೆನ್ಸ್ ಕಂಪನಿಯವರು ಮತ್ತೆ ಸಭೆಗೆ ಹಾಜರಾಗಲಿಲ್ಲ. ಸಮೀಕ್ಷೆ ವರದಿಗೂ ಬೆಳೆ ವಿಮಾ ಕಂಪನಿ ಸಹಿ ಹಾಕಲಿಲ್ಲ. ಕೊನೆ ಕಟಾವಿಗೂ ಮಧ್ಯಂತರ ಪರಿಹಾರಕ್ಕೂ ಸಂಬಂಧವಿಲ್ಲ. ಗ್ರಾಹಕರ ನ್ಯಾಯಾಲಯಕ್ಕೆ ಹೋದರೂ ರೈತರಿಗೆ ಇನ್ನು ನ್ಯಾಯ ಸಿಕ್ಕಿಲ್ಲ. ಅಸಹಾಯಕರಾಗಿ ಅನಾಥರಾಗಿದ್ದೇವೆ. ಮಳೆ ಇಲ್ಲ. ಬೆಳೆಯೂ ಇಲ್ಲ ಎಂದು ಸಂಕಷ್ಟಗಳನ್ನು ತೋಡಿಕೊಂಡರು.
ಚಳ್ಳಕೆರೆ ತಾಲ್ಲೂಕಿನ ನಾಲ್ಕು ಹೋಬಳಿಗಳಲ್ಲಿ ಬೆಳೆ ಕಡಿಮೆಯಿದೆ. ಇಳುವರಿಗೂ ಬೆಳೆ ಪ್ರಮಾಣಕ್ಕೂ ಒಂದಕ್ಕೊಂದು ತಾಳೆಯಿಲ್ಲದಂತಾಗಿದೆ. ಬೆಳೆ ವಿಮೆ ಪಾವತಿಸಿರುವ ಎಲ್ಲಾ ವಿಮೆದಾರರಿಗೂ ಅನ್ಯಾಯವಾಗುತ್ತಿರುವುದರಿಂದ ರೈತರು ಹೀನಾಯ ಪರಿಸ್ಥಿತಿಯಲ್ಲಿದ್ದಾರೆ. ಜಿಲ್ಲಾಧಿಕಾರಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬೆಳೆ ವಿಮೆ ಮಧ್ಯಂತ ಪರಿಹಾರ ನೀಡುವಂತೆ ಓರಿಯಂಟಲ್ ಇನ್ಸುರೆನ್ಸ್ ಕಂಪನಿಗೆ ಸೂಚಿಸಬೇಕೆಂದು ಡಾ.ಸಿ.ಶಿವಲಿಂಗಪ್ಪ ಒತ್ತಾಯಿಸಿದರು.

 

ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿ ಕೃಷಿಗೆ ರೈತರ ಕಾರ್ಮಿಕರ ಅಪಾರ ಶ್ರಮವಿದೆ. ಕಂದಾಯ, ಕೃಷಿ, ತೋಟಗಾರಿಕೆ, ವಿದ್ಯುತ್ ಇಲಾಖೆಯವರು ಜವಾಬ್ದಾರಿಯಿಂದ ಕೆಲಸ ಮಾಡದ ಕಾರಣ ರೈತ ಸಂಕಷ್ಟ ಎದುರಿಸುವಂತಾಗಿದೆ. ಬೆಳೆ ಸಮೀಕ್ಷೆ ಅವೈಜ್ಞಾನಿಕವಾಗಿದೆ. ಬೆಳೆ ಹಾನಿಗೆ ಯಾರೋ ಬಂದು ಸಮೀಕ್ಷೆ ಮಾಡುತ್ತಿರುವುದರಿಂದ ರೈತರಿಗೆ ಮೋಸವಾಗುತ್ತಿದೆ. ಎರಡುವರೆ ವರ್ಷಕ್ಕೆ ಎರಡುವರೆ ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಹಾರ ಭದ್ರತೆ ಹೇಗೆ ಸುರಕ್ಷಿತವಾಗಿ ಕಾಪಾಡಬೇಕೆಂಬ ಪ್ರಜ್ಞೆ ಅಧಿಕಾರಿಗಳಲ್ಲಿ ಇಲ್ಲದಂತಾಗಿದೆ. ಹಾಗಾಗಿ ಅವೈಜ್ಞಾನಿಕ ಸಮೀಕ್ಷೆ ರದ್ದಾಗಬೇಕೆಂದು ಆಗ್ರಹಿಸಿದರು.

ಸರ್ವೊದಯ ಕರ್ನಾಟಕ ಪಕ್ಷದ ಜಿಲ್ಲಾ ಸಂಚಾಲಕ ಜೆ.ಯಾದವರೆಡ್ಡಿ ಮಾತನಾಡಿ ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳು ಸೇರಿಕೊಂಡು ರೈತರಿಗೆ ನ್ಯಾಯಬದ್ದವಾಗಿ ಸಿಗಬೇಕಾದ ಮಧ್ಯಂತರ ಪರಿಹಾರ ದೊರಕಿಸುವಲ್ಲಿ ವಂಚಿಸುತ್ತಿದ್ದಾರೆ. ಬೆಳೆ ವಿಮೆ ಕಂಪನಿಗಳು ರೈತರಿಂದ ವಿಮೆ ಪಾವತಿಸಿಕೊಂಡು ವ್ಯವಸ್ಥಿತವಾಗಿ ಮೋಸ ಮಾಡುತ್ತಿರುವುದರಿಂದ ರೈತ ನಷ್ಟ ಅನುಭವಿಸುವಂತಾಗಿದೆ. ಕೃಷಿ, ಕಂದಾಯ, ತೋಟಗಾರಿಕೆ, ವಿಮೆ ಕಂಪನಿಗಳು ಜಂಟಿಯಾಗಿ ಸೇರಿಕೊಂಡು ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿದಾಗ ಮಾತ್ರ ರೈತರಿಗೆ ನ್ಯಾಯ ಒದಗಿಸಬಹುದು ಎಂದು ಹೇಳಿದರು.

ಚಳ್ಳಕೆರೆ ತಾಲ್ಲೂಕು ಕಸಬಾ ಹೋಬಳಿ ಶೇಂಗಾ ಮತ್ತು ತೊಗರಿ ಬೆಳೆಗಾರರ ಸಂಘದ ಉಪಾಧ್ಯಕ್ಷ ಎಂ.ಕರಿಯಪ್ಪ, ಕಾರ್ಯದರ್ಶಿ ಎಸ್.ಪ್ರಕಾಶ್, ಸಹ ಕಾರ್ಯದರ್ಶಿ ಡಾ.ಆರ್.ಎ.ದಯಾನಂದ್, ಯರ್ರಿಸ್ವಾಮಿ, ಆರ್ಥಿಕ ಚಿಂತಕ ಜಿ.ಎನ್.ಮಲ್ಲಿಕಾರ್ಜುನಪ್ಪ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now