ದಾವಣಗೆರೆ (ಜ.07): ದಾವಣಗೆರೆ ತಾಲ್ಲೂಕು ಕುಂದುವಾಡ ಗ್ರಾಮದ ವಿವಿಧ ರಿಸನಂ. ಗಳಲ್ಲಿ ಒಟ್ಟು 53 ಎಕರೆ 19.8 ಗುಂಟೆ ಜಮೀನು ಪ್ರದೇಶದಲ್ಲಿ ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ವಸತಿ ಯೋಜನೆ ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಜರುಗಿದ ರೈತರೊಂದಿಗಿನ ಸಭೆಯಲ್ಲಿ, ರೈತರು ಜಮೀನು ನೀಡಲು ಸಮ್ಮತಿಸಿದ್ದಾರೆ ಎಂದು ಧೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್ ತಿಳಿಸಿದ್ದಾರೆ.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರವು ಸರ್ಕಾರದಿಂದ ಅನುಮೋದನೆಗೊಂಡ ಮಹಾಯೋಜನೆ ಹಸಿರು ವಲಯದಲ್ಲಿರುವ ದಾವಣಗೆರೆ ತಾಲ್ಲೂಕು ಕುಂದವಾಡ ಗ್ರಾಮದ ವಿವಿಧ ರಿಸನಂ. ಗಳಲ್ಲಿ ಜಮೀನುಗಳ ಒಟ್ಟು 53 ಎಕರೆ 19.8 ಗುಂಟೆ ಜಮೀನು ಪ್ರದೇಶದಲ್ಲಿ ವಸತಿ ಯೋಜನೆಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, ಈ ಕುರಿತಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ಧೂಡಾ ಅಧ್ಯಕ್ಷ ದೇವರಮನಿ ಶಿವಮಕುಮಾರ್ ಅವರ ಸಮ್ಮುಖದಲ್ಲಿ ವಸತಿ ಯೋಜನೆ ಅಭಿವೃದ್ಧಿಪಡಿಸಲು ನೇರ ಖರೀದಿ ಮುಖಾಂತರ ಜಮೀನು ನೀಡಲು ಸಂಬಂಧಿಸಿದ ಖಾತೆದಾರರೊಂದಿಗೆ ದರ ನಿಗದಿ ಮಾಡಲು ಶುಕ್ರವಾರ ಸಭೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳು ಜಮೀನಿಗೆ ಎಕರೆ ಒಂದಕ್ಕೆ 1.18 ಕೋಟಿ ರೂ. ನೀಡಲು, ಆ ಭಾಗದ ಜಮೀನಿನ ಮಾಲೀಕರೊಂದಿಗೆ ಚರ್ಚೆ ನಡೆಸಿದರು. ಅದರಂತೆ ಜಮೀನಿಗೆ ಪ್ರತಿ ಎಕರೆಗೆ 1.18 ಕೋಟಿ ರೂ. ನಂತೆ ಪಡೆಯಲು ಎಲ್ಲ ರೈತರು ಒಪ್ಪಿಗೆ ಸೂಚಿಸಿರುತ್ತಾರೆ.
ಸಭೆಯಲ್ಲಿ ಧೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಸಿಲ್ದಾರ್ ಗಿರೀಶ್, ಉಪನೊಂದಣಾಧಿಕಾರಿ ಹಾಗೂ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ.ಹೆಚ್. ಶ್ರೀಕರ್, ಪ್ರಾಧಿಕಾರದ ಸದಸ್ಯರುಗಳಾದ ಮಾರುತಿರಾವ್ ಘಾಟ್ಗೆ, ಲಕ್ಷ್ಮಣ, ಬಾತಿ ಚಂದ್ರಶೇಖರ್, ಗೌರಮ್ಮ ವಿ ಪಾಟೀಲ್, ರೈತ ಮುಖಂಡರುಗಳಾದ ಜಿ.ಸಿ. ದೇವರಾಜ್, ಎಂ. ಹನುಮಂತಪ್ಪ, ಷಣ್ಮುಖಪ್ಪ, ನರಸಪ್ಪರ ಶಿವಣ್ಣ ಮತ್ತಿತರರು ಸಭೆಯಲ್ಲಿ ಹಾಜರಿದ್ದರು ಎಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದೇವರಮನಿ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಚಿನ್ನದ ಬೆಲೆಯಂತೂ ದಿನೇ ದಿನೇ ಚಿನ್ನ ಬೆಳ್ಳಿ ಎರಡರಲ್ಲೂ ಸಿಕ್ಕಾಪಟ್ಟೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಏರಿಕೆಯಾಗಿದ್ದು, ಒಂದೇ…
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…