Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಆಗ್ರಹ: ರೈತ ಸಂಘ-ಹಸಿರುಸೇನೆಯಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 24 : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಗರಕ್ಕೆ ಆಗಮಿಸುವ ಮುನ್ನ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

 

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಮಳೆ ಕೊರತೆಯಿಂದ ಜಿಲೆಯ ರೈತರು ಈಗಾಗಲೆ ಸಂಕಷ್ಟದಲ್ಲಿರುವುದರಿಂದ ಜಿಲ್ಲೆಯನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಿ ಬೆಳೆ ಪರಿಹಾರ ನೀಡಬೇಕು. ಬೆಳೆ ವಿಮೆ ಪಾವತಿಸಿರುವ ರೈತರಿಗೆ ಅಧಿಕಾರಿಗಳು ಹಾಗೂ ವಿಮೆ ಕಂಪನಿಯವರು ಶಾಮೀಲಾಗಿ ಮೋಸ ಮಾಡಿದ್ದಾರೆ. ಬೆಸ್ಕಾಂ ಇಲಾಖೆಯಲ್ಲಿ ರೈತರ ಪಂಪ್‍ಸೆಟ್‍ಗಳಿಗೆ ಸ್ವಯಂ ವೆಚ್ಚದಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಎರಡರಿಂದ ಮೂರು ಲಕ್ಷ ರೂ.ಗಳ ವೆಚ್ಚವಾಗುತ್ತಿದ್ದು, ಅಕ್ರಮ-ಸಕ್ರಮದಡಿಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ರೈತರ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಅವಕಾಶವಿದ್ದರೂ ಅಧಿಕಾರಿಗಳ ನಿರ್ಲಕ್ಷೆಯಿಂದ ರೈತರು ಕತ್ತಲಲ್ಲಿ ಜೀವಿಸುವಂತಾಗಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ರೈತರ ನೆರವಿಗೆ ಮುಂದೆ ಬರಬೇಕು. ಇಲ್ಲವಾದಲ್ಲಿ ಶನಿವಾರ ನಗರಕ್ಕೆ ಆಗಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ಗೆ ಕಪ್ಪುಪಟ್ಟಿ ಪ್ರದರ್ಶಿಸಲಾಗುವುದೆಂದು ಎಚ್ಚರಿಸಿದರು.

 

ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಭವಾಗುತ್ತಿದೆ. ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ರೈತರಿಗೆ ಯಾವುದೇ ಪ್ರಯೋಜನವಿಲ್ಲ. ಭದ್ರಾಮೇಲ್ದಂಡೆ ಯೋಜನೆಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವಂತೆ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ್ ಒತ್ತಾಯಿಸಿದರು.

 

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಬಿ.ನಿಜಲಿಂಗಪ್ಪ, ರೈತ ಮುಖಂಡರುಗಳಾದ ಎಂ.ಸಿದ್ದಪ್ಪ ಹಳಿಯೂರು, ನಾಗರಾಜ್ ಮುದ್ದಾಪುರ, ಎಂ.ಶಿವಮೂರ್ತಿ, ಸಂಜೀವಪ್ಪ, ಮಾರುತಿ, ಎಂ.ಕೆ.ಓಬಳೇಶ, ರಾಜಶೇಖರಪ್ಪ, ಕೆ.ಎ.ಕಲ್ಲೇಶ, ಗುರುಸಿದ್ದಪ್ಪ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ | ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ; ಕೋರ್ಟ್​ ಆದೇಶ

ಚಿತ್ರದುರ್ಗ : ಬರ, ಭದ್ರಾ ಮೇಲ್ದಂಡೆ, ಗ್ಯಾರಂಟಿ ರಿಪೋರ್ಟ್ ರೆಡಿ ಇಟ್ಟುಕೊಳ್ಳಿ: ಸಿಎಂ ಸಭೆಗೂ ಮುನ್ನ ಅಧಿಕಾರಿಗಳಿಗೆ ಡಿಸಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ : ಬೀದಿಗಿಳಿದು ಸೂಕ್ತ ಉತ್ತರ ನೀಡಲಿದ್ದೇವೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಂ.ಎಲ್.ಸಿ.ನವೀನ್ ಮುನ್ನೆಚ್ಚರಿಕೆ

ಶಾಸಕ ​ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ‘ಯುವ ಸೇನೆ’ ಪಟ್ಟು: ಬರಗೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ!

ಚಿತ್ರದುರ್ಗದಲ್ಲಿ ‘ದುರ್ಗೋತ್ಸವ’ ಆಚರಣೆಗೆ ಅಗ್ರಹ: ಸರ್ಕಾರದ ಗಮನಸೆಳೆಯಲು ಗಣೇಶ್ ಏಕಾಂಗಿ ಪ್ರತಿಭಟನೆ!

ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಚಿತ್ರದುರ್ಗದಲ್ಲಿ ವಕೀಲರ ಪ್ರತಿಭಟನೆ