Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಡಿಕೆ ಧಾರಣೆ ಬಗ್ಗೆ ರೈತರಿಗೆ ಆತಂಕ ಬೇಡ : ಗೃಹ ಸಚಿವ ಆರಗ ಜ್ಞಾನೇಂದ್ರ.

Facebook
Twitter
Telegram
WhatsApp

ಬೆಂಗಳೂರು: ಅಡಕೆ ಧಾರಣೆ ಬಗ್ಗೆ ರೈತರಲ್ಲಿ ಯಾವುದೇ ಆತಂಕ ಪಡುವುದು ಬೇಡ ಎಂದಿರುವ ಗೃಹ ಸಚಿವರೂ ಹಾಗೂ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಶ್ರೀ ಆರಗ ಜ್ಞಾನೇಂದ್ರ ರವರು ಕೇಂದ್ರ ಸರಕಾರವು ನಿಗದಿಪಡಿಸಿದ ಅಡಕೆ ಬೆಲೆಯ ಅಂದಾಜು ವೆಚ್ಚವನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ, ಒತ್ತಾಯಿಸಲು ಕೇಂದ್ರಕ್ಕೆ ನಿಯೋಗವನ್ನು ತೆಗೆದುಕೊಂಡು ಹೋಗಲಾಗುತ್ತದೆ, ಎಂದಿದ್ದಾರೆ.

ರಾಜ್ಯದ ಮಲೆನಾಡು ಭಾಗದ ಲಕ್ಷಾಂತರ ರೈತ ಹಾಗೂ ರೈತ_ಕಾರ್ಮಿಕ ಕುಟುಂಬಗಳ ಆರ್ಥಿಕ ಬೆನ್ನೆಲುಬಾಗಿರುವ ಅಡಕೆ ಬೆಳೆಗೆ ಸುಸ್ಥಿರ ಬೆಲೆ ಯನ್ನೊದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬದ್ಧವಾಗಿದ್ದು, ಈ ಕುರಿತು ರೈತ ಸಮುದಾಯ ಯಾವುದೇ ಆತಂಕ ಪಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಹಣದುಬ್ಬರ ಹಾಗೂ ಇನ್ನಿತರ ಕಾರಣಗಳಿಂದಾಗಿ ಅಡಕೆ ಬೆಳೆ ಉತ್ಪಾದನಾ ವೆಚ್ಚವೂ ಹೆಚ್ಚಿದ್ದು ಪ್ರಸ್ತುತ ಪ್ರತಿ ಕಿಲೋ ಅಡಕೆ ಅಂದಾಜು ವೆಚ್ಚ ರೂಪಾಯಿ 25 ರಸ್ಟಿದ್ದು, ಸುಮಾರು ಆರು ವರ್ಷಗಳ ಹಿಂದೆ ನಿಗದಿ ಪಡಿಸಲಾಗಿದೆ ಹಾಗೂ ಪುನಃ ಪರಿಷ್ಕರಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದಿದ್ದಾರೆ.

ಈ ಹಿಂದೆ ಕೇಂದ್ರ ಸರಕಾರ ದೇಶಿಯ ಅಡಿಕೆ ಉತ್ಪನ್ನ ಅಂದಾಜು ವೆಚ್ಚವನ್ನು ಹೆಚ್ಚಳ ಮಾಡಿದಾಗ, ವಿದೇಶದಿಂದ ಅಮದಾಗುತ್ತಿದ್ದ ಕಡಿಮೆ ಗುಣಮಟ್ಟದ ಅಡಿಕೆ ಪ್ರಮಾಣ ಗಣನೀಯವಾಗಿ ತಗ್ಗಿದ್ದನ್ನು ಸ್ಮರಿಸಿದ್ದಾರೆ.

ವಿದೇಶದಿಂದ ಆಮದಾಗುವ ಅಡಿಕೆ, ಗುಣಮಟ್ಟದಲ್ಲಿ ಅತ್ಯಂತ ನಿಕೃಷ್ಟ ವಾಗಿದ್ದು ದೇಶಿಯ ಅಡಿಕೆ, ಗುಣಮಟ್ಟದಲ್ಲಿ ಆತ್ಯುಕೃಷ್ಟ ವಾಗಿದೆ ಎಂದು, ಪ್ರಮಾಣೀಕೃತ ವಾಗಿದೆ ಎಂದೂ ತಿಳಿಸಿದ್ದಾರೆ.

ಕೇಂದ್ರ ಕೃಷಿ ಸಚಿವರನ್ನು ರಾಜ್ಯ ಟಾಸ್ಕ್ ಫೋರ್ಸ್ ನಿಯೋಗ ಭೇಟಿಯಾಗಿ, ಅಡಿಕೆ ಉತ್ಪನ್ನ ಅಂದಾಜು ವೆಚ್ಚ ಪರಿಷ್ಕರಿಸಿ ಹೆಚ್ಚಳ ಮಾಡಲು ಮನವರಿಕೆ ಮಾಡಿ ಕೊಡಲಾಗುವುದು, ರೈತರು ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಹಾಗೂ ಭಯಪಡುವುದು ಬೇಡ ಎಂದೂ ಸಚಿವರು ವಿನಂತಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!