ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729
ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್. 02 : ತಾಲೂಕಿನ ಕಾಲುವೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗೌಡರಹಟ್ಟಿ, ಯಾದಲಗಟ್ಟೆ, ಕ್ಯಾತಗೊಂಡನಹಳ್ಳಿ ಗ್ರಾಮಗಳಲ್ಲಿ ಅಕ್ರಮ ಮಧ್ಯ ಮಾರಾಟ ಹೆಚ್ಚಾಗಿದ್ದು ಇದರಿಂದ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟಾಗಿದೆ ಈ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಅಬಕಾರಿ ಇನ್ಸ್ಪೆಕ್ಟರ್ ನಾಗರಾಜ್ ಅವರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಗ್ರಾಮದಲ್ಲಿ ಯುವಕರು, ಕಾಲೇಜು ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗಿದ್ದಾರೆ. ಕೂಲಿ ಮಾಡಿ ದುಡಿದ ಹಣವನ್ನು ಮದ್ಯ ಸೇವನೆ ಮಾಡಲು ಹಾಳು ಮಾಡುತ್ತಿದ್ದಾರೆ.
ಮಧ್ಯ ಸೇವನೆ ಮಾಡಿದ ನಂತರ ಹೆಂಡತಿಯ ಮೇಲೆ ಹಲ್ಲೆ ಮಾಡುವುದು, ಗ್ರಾಮದಲ್ಲಿ ಅಶಾಂತಿ ವಾತಾವರಣವನ್ನು ಉಂಟುಮಾಡುವುದು ಮಾಡುತ್ತಿದ್ದಾರೆ. ಈ ರೀತಿ ಮಧ್ಯ ಸೇವನೆಯಿಂದ ಆರೋಗ್ಯ ಹಾಳಾಗುತ್ತದೆ ಎಂದು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆಪಿ ಭೂತಯ್ಯ ತಿಳಿಸಿದರು.
ಅಕ್ರಮ ಮಧ್ಯ ಮಾರಾಟಕ್ಕೆ ಕಡಿವಾಣ ಹಾಕದಿದ್ದರೆ ಅಬಕಾರಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಗ್ರಾಮಸ್ಥರು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಕೆ. ಪಿ. ಭೂತಯ್ಯ, ತಿಪ್ಪಕ್ಕ, ಪಾಲಯ್ಯ, ತಿಪ್ಪೇಸ್ವಾಮಿ ಹಾಗೂ ಮತ್ತಿತರರು ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















