Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರೈತರ ಪ್ರತಿಭಟನೆ : ಕಬ್ಬು ಬೆಳೆಗೆ ಬೆಲೆ ನಿಗದಿ ಅಧಿಕಾರವನ್ನ ಸಿಎಂಗೆ ವಹಿಸಿದ ಸಂಪುಟ..!

---Advertisement---

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಬಲ ಬೆಲೆ ನೀಡಿ ಎಂದು ಒತ್ತಾಯಿಸಿ. ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆದಿದೆ. ವಿಧಾನಸೌಧದಲ್ಲಿ ಈ ಸಭೆ ನಡೆದಿದ್ದು, ಮುಕ್ತಾಯವಾಗಿದೆ. ಸಭೆಯ ನಡುವೆ ಚರ್ಚೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರವನ್ನು ನೀಡಲಾಗಿದೆ.

ಇಂದಿನ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ್ದಾರೆ. ರೈತರ ಬೇಡಿಕೆಗಳ ಕುರಿತು ಗಂಭೀರ ಸಮಾಲೋಚನೆ ನಡೆದಿದೆ. ಬಳಿಕ ದರ ನಿಗದಿಯ ಅಧಿಕಾರವನ್ನು ಸಿಎಂ ಅವರಿಗೆ ನೀಡಲಾಗಿದೆ. ಇದೆ ವೇಳೆ ಬಿವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಅನಗತ್ಯವಾಗಿ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡ್ತಿದ್ದಾರೆ ವಿಜಯೇಂದ್ರ. ನಾವೂ ರೈತರ ಪರವಾಗಿದ್ದೇವೆ. ಆದರೂ ವಿಜಯೇಂದ್ರ ರೈತರ ಹೋರಾಟದ ಸ್ಥಳಕ್ಕೆ ಹೋಗಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ನಾಳೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನುರ್ಧರಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದ ಹಿನ್ನಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.  ಸಕ್ಕರೆ ಕಾರ್ಖಾನೆಗಳ ಜೊತೆ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಕಬ್ಬು ಬೆಲೆ ನಿಗದಿಯ ಬಗ್ಗೆ ತೀರ್ಮಾನ  ಕೈಗೊಳ್ಳಲಿದ್ದಾರೆ. ನಾಳೆ ಎಲ್ಲವನ್ನು ಪರಿಶೀಲನೆ ನಡೆಸಿ, ರೈತರಿಗೆ ಯಾವ ತೀರ್ಮಾನ ನೀಡಬಹುದು ಎಂಬುದನ್ನ ನಿರ್ಧಾರ ಮಾಡಲಿದ್ದಾರೆ.

 

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...