ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕಬ್ಬು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಬಲ ಬೆಲೆ ನೀಡಿ ಎಂದು ಒತ್ತಾಯಿಸಿ. ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕ್ಯಾಬಿನೆಟ್ ಸಭೆ ನಡೆದಿದೆ. ವಿಧಾನಸೌಧದಲ್ಲಿ ಈ ಸಭೆ ನಡೆದಿದ್ದು, ಮುಕ್ತಾಯವಾಗಿದೆ. ಸಭೆಯ ನಡುವೆ ಚರ್ಚೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರವನ್ನು ನೀಡಲಾಗಿದೆ.
ಇಂದಿನ ಸಂಪುಟ ಸಭೆಯಲ್ಲಿ ಕಬ್ಬು ಬೆಳೆಗಾರರ ಹೋರಾಟದ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದ್ದಾರೆ. ರೈತರ ಬೇಡಿಕೆಗಳ ಕುರಿತು ಗಂಭೀರ ಸಮಾಲೋಚನೆ ನಡೆದಿದೆ. ಬಳಿಕ ದರ ನಿಗದಿಯ ಅಧಿಕಾರವನ್ನು ಸಿಎಂ ಅವರಿಗೆ ನೀಡಲಾಗಿದೆ. ಇದೆ ವೇಳೆ ಬಿವೈ ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಗರಂ ಆಗಿದ್ದಾರೆ. ನಮ್ಮ ಸರ್ಕಾರದ ವಿರುದ್ಧ ಅನಗತ್ಯವಾಗಿ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡ್ತಿದ್ದಾರೆ ವಿಜಯೇಂದ್ರ. ನಾವೂ ರೈತರ ಪರವಾಗಿದ್ದೇವೆ. ಆದರೂ ವಿಜಯೇಂದ್ರ ರೈತರ ಹೋರಾಟದ ಸ್ಥಳಕ್ಕೆ ಹೋಗಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ನಾಳೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನುರ್ಧರಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದ ಹಿನ್ನಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆಗೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳ ಜೊತೆ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಕಬ್ಬು ಬೆಲೆ ನಿಗದಿಯ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ನಾಳೆ ಎಲ್ಲವನ್ನು ಪರಿಶೀಲನೆ ನಡೆಸಿ, ರೈತರಿಗೆ ಯಾವ ತೀರ್ಮಾನ ನೀಡಬಹುದು ಎಂಬುದನ್ನ ನಿರ್ಧಾರ ಮಾಡಲಿದ್ದಾರೆ.
