Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೇವನಹಳ್ಳಿಯಲ್ಲಿ ಪೋಲಿಸ್ ದೌರ್ಜನ್ಯ ಖಂಡಿಸಿ ಚಿತ್ರದುರ್ಗದಲ್ಲಿ ರೈತರ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ.ಜೂ. 26 : ದೇವನಹಳ್ಳಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಹೊರಾಟಗಾರರ ಮೇಲೆ ನಡೆದ ಪೋಲಿಸ್ ದೌರ್ಜನ್ಯ ಖಂಡಿಸಿ ಚಿತ್ರದುರ್ಗ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಸಂಯುಕ್ತ ಹೋರಾಟ ಸಮಿತಿವತಿಯಿಂದ ರೈತರು ಪ್ರತಿಭಟನೆ ನಡೆಸಿದ್ದಾರೆ.

ದೇವನಹಳ್ಳಿಯಲ್ಲಿ ಅತ್ಯಂತ ಶಾಂತಿಯುತವಾಗಿ ನಡೆದಿದ್ದ  ರೈತರ ಪ್ರತಿಭಟನೆಯನ್ನ ಪೊಲಿಸ್ ಬಲ ಬಳಸಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವನ್ನ ಕಾಂಗ್ರೆಸ್ ಸರ್ಕಾರ ನಡೆಸಿದೆ ವಯಸ್ಸಾದ ಮಹಿಳೆರನ್ನು ಬಿಡದೆ ಎಲ್ಲಾ ಹೋರಾಟಗಾರರನ್ನು ಸಿಕ್ಕಾಪಟ್ಟಿ ಎಳೆದಾಡಿ ಪೋಲಿಸ್ ವಶಕ್ಕೆ ಪಡೆದಿದ್ದಾರೆ ಅಭಿವೃದ್ಧಿ ಹೆಸರಿನಲ್ಲಿ ರಿಯಲ್ ಎಸ್ಟೇಟ್ ದಂದೆಕೊರರಿಗೆ ಲಾಭ ಮಾಡಿಕೊಡಲು ಅಸಂಖ್ಯಾತ ರೈತ ಸಮುದಾಯವನ್ನು ಬೀದಿಪಾಲು ಮಾಡಲು ಹೊರಟಿದೆ ಎಂದು ಆಗ್ರಹಿಸಿದರು.

ದೇವನಹಳ್ಳಿ ಚನ್ನರಾಯಪಟ್ಟಣ ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು, ಬಂಧಿತ ರೈತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು, ಹೊರಾಟಗಾರರೊಂದಿಗೆ ಹೀನಾಯವಾಗಿ ವರ್ತಿಸಿದ ಪೋಲಿಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾಧ ಧನಂಜಯ, ಮಲ್ಲಿಕಾರ್ಜನ್, ಬಸ್ತಿಹಳ್ಳಿ ಸುರೇಶ್‍ಬಾಬು, ನಾಗರಾಜ್ ಷಫಿವುಲ್ಲಾ, ಪುರುಷೋತ್ತಮ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಸಿದ್ದಪ್ಪ, ಯಾದವರೆಡ್ಡಿ, ಹೊರಕೇರಪ್ಪ ಜಿ.ಕೆ.ನಾಗರಾಜ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment