Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರು ಸಹಕಾರ ಸಂಘಗಳ ಅಭಿವೃದ್ದಿಗೆ ಕೈಜೋಡಿಸಬೇಕು : ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 7899864552

ಚಿತ್ರದುರ್ಗ: ರೈತರಿಗೆ, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಹಕಾರ ಸಂಘಗಳು ಕೆಲಸ ಮಾಡಬೇಕೆಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಹೇಳಿದರು.

ಹೊಳಲ್ಕೆರೆ ತಾಲ್ಲೂಕಿನ ತಾಳ್ಯ ಗ್ರಾಮದಲ್ಲಿ ಗುರುವಾರ 69 ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಫ್ಯಾಕ್ಸ್ ಕಚೇರಿ, ಗೋಡಾನ್ ಉದ್ಘಾಟಿಸಿ ಮಾತನಾಡಿದರು.

ಸಣ್ಣ ಅಧಿಕಾರಿ, ದೊಡ್ಡ ಅಧಿಕಾರಿ ಎನ್ನುವ ತಾರತಮ್ಯವಿಲ್ಲದೆ ಸಾರ್ವಜನಿಕರಿಗೆ ಉಪಯೋಗವಾಗುವ ರೀತಿಯಲ್ಲಿ ಕೆಲಸ ಮಾಡಬೇಕು. ಶೂನ್ಯ ಹಾಗೂ ಶೇ.3 ರಷ್ಟು ಬಡ್ಡಿ ದರದಲ್ಲಿ ಸಹಕಾರ ಸಂಘಗಳಿಂದ ರೈತರಿಗೆ ಸಾಲ ನೀಡಲಾಗಿದೆ. ಸಹಕಾರ ಸಂಘಗಳ ಸಾಧಕ-ಬಾಧಕಗಳನ್ನು ಅರ್ಥಮಾಡಿಕೊಂಡು ರೈತರು ಸಹಕಾರ ಸಂಘಗಳ ಅಭಿವೃದ್ದಿಗೆ ಕೈಜೋಡಿಸಬೇಕು.

ಹೊಳಲ್ಕೆರೆ ತಾಲ್ಲೂಕಿನಲ್ಲಿ 27 ಸಾವಿರ ರೈತರು ಬೆಳೆ ವಿಮೆ ಪಾವತಿಸಿದ್ದಾರೆ. 26 ಸಾವಿರ ರೈತರಿಗೆ ಬೆಳೆವಿಮೆ ಕೊಡಿಸುವ ಕೆಲಸ ಇಲ್ಲಿ ಆಗಲಿದೆ. ಕಳೆದ ಆರು ತಿಂಗಳುಗಳಿಂದ ಮಳೆ ಸುರಿದ ಪರಿಣಾಮ ರೈತರ ಬೆಳೆಗಳು ನಾಶವಾಗಿದೆ. ಇನ್ನು ಮೂವತ್ತು ವರ್ಷಗಳ ಕಾಲ ಕುಡಿಯುವ ನೀರಿನ ಸಮಸ್ಯೆ ರೈತರಿಗೆ ವಿದ್ಯತ್ ಅಭಾವವಾಗದಂತೆ ಮುತುವರ್ಜಿ ವಹಿಸಿ ಕೆಲಸ ಮಾಡಿದ್ದೇನೆ. ಸಹಕಾರ ಸಂಘಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ರೈತರಲ್ಲಿ ಮನವಿ ಮಾಡಿದರು.

ಕೊರೋನಾ ಸಂದರ್ಭದಲ್ಲಿ ದೇಶದ ಪ್ರಧಾನಿ ನರೇಂದ್ರಮೋದಿ ಪ್ರತಿ ವ್ಯಕ್ತಿಗೆ ಐದು ಕೆ.ಜಿ.ಅಕ್ಕಿ ಉಚಿತವಾಗಿ ನೀಡಿದ್ದಾರೆ. ರೈತರ ಖಾತೆಗಳಿಗೆ ಹಣ ಜಮೆ ಆಗಿದೆ. ಪಾಶ್ಚಿಮಾತ್ಯ ರಾಷ್ಟ್ರಗಳು ಕೋವಿಡ್‍ಗೆ ಲಸಿಕೆ ಕಂಡುಹಿಡಿಯಲು ಇನ್ನು ಆಗಿಲ್ಲ. ಅದೇ ನಮ್ಮ ದೇಶದಲ್ಲಿ ಉಚಿತವಾಗಿ ಎಲ್ಲರಿಗೂ ಲಸಿಕೆ ನೀಡಿದ ಫಲವಾಗಿ ಸಾವು-ನೋವಿನ ಸಂಖ್ಯೆ ಕಡಿಮೆಯಿದೆ. ಬೇರೆ ಮುಂದುವರೆದ ದೇಶಗಳಲ್ಲಿ ಒಂದು ಲಸಿಕೆಗೆ ನೂರು ಡಾಲರ್ ನೀಡಿ ಪಡೆಯಬೇಕು. ಅಂತಹ ಪರಿಸ್ಥಿತಿ ನಮ್ಮ ದೇಶದಲ್ಲಿಲ್ಲ ಎಂದು ಮೋದಿಯ ಕಾಳಜಿಯನ್ನು ಗುಣಗಾನ ಮಾಡಿದರು. ನೆರೆಯ ರಾಷ್ಟ್ರ ಶ್ರೀಲಂಕಾದಲ್ಲಿ ಅಕ್ಕಿಗೆ ಅಭಾವವಿದೆ. ನಮ್ಮ ರೈತರು ಬೆಳೆದ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಿ ಲಾಭ ಪಡೆಯುವಂತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ತಾಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ಹೆಚ್.ಉಮೇಶ್, ಮಾಜಿ ಶಾಸಕ ಮಂಜುನಾಥ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಗಮದ ಅಧ್ಯಕ್ಷ ಎಸ್.ಆರ್.ಗಿರೀಶ್, ಡಿ.ಸಿ.ಸಿ.ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲ್ಯಾಸ್ ಉಲ್ಲಾಷರೀಫ್, ಎಚ್.ಮೂರ್ತಿ, ಮಾತೃಶ್ರೀ ಎನ್. ಮಂಜುನಾಥ, ವೀರೇಶ್, ಪಿ.ಅಂಜನಮೂರ್ತಿ, ನರಪ್ಪ, ಶ್ರೀಮತಿ ಭಾಗ್ಯಮ್ಮ, ಶ್ರೀಮತಿ ರಂಜಿತಾ, ಟಿ.ಹೆಚ್.ತಿಮ್ಮಪ್ಪ, ಎಂ.ಮಾರುತೇಶ್, ಪಿ.ಹೆಚ್.ಲೋಕೇಶ್, ಗ್ರಾಮ ಪಂಚಾಯಿತಿ ಸದಸ್ಯರುಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ವಿವಿಧ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು, ಕಾರ್ಯದರ್ಶಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಎಸ್ಐಟಿ ತನಿಖೆಗೆ : ಡಿಸಿಎಂ ಮಾತಿಗೆ ಅಭಿನಂದನೆ ಸಲ್ಲಿಸಿದ ಠೇವಣಿದಾರರು

ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಗರಣ ಈ ಮೊದಲು ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅದರ ತನಿಖೆಯನ್ನು ಎಸ್ಐಟಿಗೆ ವಹಿಸುತ್ತೇನೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಬಳಿ ಚರ್ಚೆ ಮಾಡುತ್ತೇನೆ ಎಂದು

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

error: Content is protected !!