ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ; ಮೂವರ ದುರ್ಮರಣ, ಮೂವರಿಗೆ ಗಾಯ

1 Min Read

ಚಿತ್ರದುರ್ಗ, ಸುದ್ದಿಒನ್, (ಆ.27) :  ರಾಷ್ಟ್ರೀಯ ಹೆದ್ದಾರಿ 48 ರ ಸೀಬಾರ ಬಳಿ ನಿನ್ನೆ  (ಶುಕ್ರವಾರ) ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಹಾಗೂ ಲಾರಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶುಕ್ರವಾರ ರಾತ್ರಿ 9:30 ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಬೆಂಗಳೂರಿನಿಂದ ಶಿರಡಿಗೆ ತೆರಳುತ್ತಿದ್ದ ಫಾರ್ಚೂನರ್ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಬೆಂಗಳೂರು ಮಾರ್ಗಕ್ಕೆ ತಿರುಗಿ, ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ.ಈ ವೇಳೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೆ ಮೂವರು ಗಾಯಗೊಂಡಿದ್ದಾರೆ. ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರನ್ನು ಮನೀಶ್(40), ಸಿಂಚನ(35) ಮತ್ತು ಭೂಮಿಕಾ ಎಂದು ಗುರುತಿಸಲಾಗಿದ್ದು ಅವರೆಲ್ಲರೂ ಬೆಂಗಳೂರಿನ ರಾಜಾಜಿನಗರದವರು ಮತ್ತು  ಕನಗಮುತ್ತು, ಗಿರಿಧರ ಮತ್ತು ಆಶಾಕಿರಣ್ ಗಾಯಾಳುಗಳು ಎಂದು ತಿಳಿದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಹಾಗೂ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *