ತುಮಕೂರು: ಕಾರು ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿ, ತಂದೆ, ತಾಯಿ ಮತ್ತು ಮಗ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. 51 ವರ್ಷದ ನಾರಾಯಣಪ್ಪ, 45 ವರ್ಷದ ನಾಗರತ್ನಮ್ಮ, 21 ವರ್ಷದ ಸಾಗರ್ ಮತ್ತು 60 ವರ್ಷದ ರಾಮಣ್ಣ ಮೃತ ವ್ಯಕ್ತಿಗಳಾಗಿದ್ದಾರೆ.

ತುಮಕೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಇಂಡಿಕಾ ಕಾರಿನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಇಂಡಿಕಾ ಕಾರು ಮತ್ತು ಕ್ಯಾಂಟರ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಗುದ್ದಿದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಮೃತರನ್ನು ಚಿಕ್ಕನಾಯಕನಹಳ್ಳಿಯವರು ಎಂದು ಗುರುತಿಸಲಾಗಿದೆ. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





GIPHY App Key not set. Please check settings