Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಗಳ ಮೇಲೆ ಅತ್ಯಾಚಾರವೆಸಗಿದ ತಂದೆಗೆ ಗಲ್ಲು ಶಿಕ್ಷೆ ವಿಧಿಸಿ : ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 04 : ವಿ.ಪಾಳ್ಯ ಗ್ರಾಮದಲ್ಲಿ ಮಂಜುನಾಥ್ ತನ್ನ ಹದಿನಾಲ್ಕು ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿರುವುದನ್ನು ಖಂಡಿಸಿ ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆಯಿಂದ ಅಪರ ಜಿಲ್ಲಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಮಂಜುನಾಥ್ ಮಗಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಾಗಿದೆ. ಇದಕ್ಕೆ ತಾಯಿಯೆ ಗಂಡನಿಗೆ ಪ್ರೋತ್ಸಾಹ ನೀಡಿರುವುದು ನಾಚಿಕೆಗೇಡಿನ ಸಂಗತಿ. ಸೂಕ್ತ ತನಿಖೆ ನಡೆಸಿ ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾನಿರತರು ವಿನಂತಿಸಿದರು.

ಕರ್ನಾಟಕ ಮಹಿಳಾ ಮತ್ತು ಮಕ್ಕಳ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷೆ ಹೆಚ್.ಭಾರತಿ, ಜಿಲ್ಲಾಧ್ಯಕ್ಷೆ ತುಳಸಿ ರಮೇಶ್, ಭಾಗ್ಯಮ್ಮ, ಶ್ರೀದೇವಿ, ನಿರ್ಮಲ, ರತ್ನಮ್ಮ,  ಚೌಡಮ್ಮ, ಲಕ್ಷ್ಮಮ್ಮ, ಬಸಮ್ಮ, ಶಂಕರಮ್ಮ, ಪ್ರಿಯಾಂಕ, ವೇದಿಕೆ ರಾಜ್ಯ ಗೌರವಾಧ್ಯಕ್ಷ ಹನುಮಂತಪ್ಪ ದುರ್ಗ, ದೇವರಾಜ್ ನಗರಂಗೆರೆ, ಅನಂತಮೂರ್ತಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now