ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ, ಭೂ ಕುಸಿತದ ಆತಂಕ ಉಂಟಾಗಿದೆ. ಹೊನ್ನಾವರ ತಾಲೂಕಿನ ಅಪ್ಸರಕೊಂಡದಲ್ಲಿ ಭೂ ಕುಸಿತದ ಆತಂಕ ಹೆಚ್ಚಾಗಿದೆ. ಇಲ್ಲಿರುವ ಗುಡ್ಡ ಕಳೆದ ಐದು ವರ್ಷದಿಂದ ಒಂದೆ ಸ್ಥಿತಿಯಲ್ಲಿದೆ.
ಸ್ಥಳೀಯ ಆಡಳಿತ ಮಂಡಳಿ ಭಟ್ಕಳದ ಮುಟ್ಠಳಿ ದುರಂತದ ಬಳಿಕ ಗಂಭೀರವಾಗಿ ಪರಿಗಣಿಸಿದೆ. ಕೆಳಗಿನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಪ್ಸರಕೊಂಡ ಬಳಿ ಇರುವ ಈ ಗುಡ್ಡ. ಸ್ಥಳಕ್ಕೆ ಗಣಿ ಇಲಾಖೆ, ಕಂದಾಯ, ನೋಡೆಲ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಆಡಳಿತ ಮಂಡಳಿ, ಭೂ ಕುಸಿತದ ಪ್ರದೇಶದಲ್ಲಿದ್ದ ಕುಟುಂಬಸ್ಥರನ್ನ ಕಾಳಜಿ ಕೇಂದ್ರಕ್ಕೆ ಶಿಪ್ಟ್ ಮಾಡಿದ್ದಾರೆ. ರಾತ್ರಿ ಮಾತ್ರ ಕಾಳಜಿ ಕೇಂದ್ರಕ್ಕೆ ಉಳಿಯಲು ಅವಕಾಶ ನೀಡಲಾಗಿದೆ. ಮಳೆ ರೆಡ್ ಅಲರ್ಟ್ ಹಿನ್ನಲೆಯಲ್ಲಿ 64 ಕುಟುಂಬಸ್ಥರಿಗೆ ಕಾಳಜಿ ಕೇಂದ್ರದಲ್ಲಿ ಉಳಿಯಲು ಅವಕಾಶ ಮಾಡಿಕೊಡಲಾಗಿದೆ. ಇನ್ನು 3 ದಿನಗಳ ಕಾಲ ಕಾಳಜಿ ಕೇಂದ್ರದಲ್ಲಿರುವಂತೆ ಸೂಚನೆ ನೀಡಿದ್ದಾರೆ. ಜನರ ಸುರಕ್ಷತಾ ದೃಷ್ಟಿಯಿಂದ ಕಾಳಜಿ ಕೇಂದ್ರ ತೆರೆದ ಸ್ಥಳೀಯ ಆಡಳಿತ ಮಂಡಳಿ.