Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗೊಬ್ಬರ-ಬೀಜ ಮಾರಾಟಗಾರರ ಪ್ರತಿಭಟನೆ: ವಿವಿಧ ಬೇಡಿಕೆ ಈಡೇರಿಸಲು ಜಿಲ್ಲಾಡಳಿತಕ್ಕೆ ಮನವಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 : ಡಿಎಪಿ ಮತ್ತು ಯೂರಿಯಾ ಗೊಬ್ಬರದ ಜೊತೆಗೆ ಒತ್ತಾಯವಾಗಿ ಬೇರೆ ಉತ್ಪಾದನೆಗಳನ್ನು ಲಿಂಕ್‍ಗೊಳಿಸುವುದನ್ನು ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸೀಡ್ಸ್ ಕೆಮಿಕಲ್ಸ್ ಫರ್ಟಿಲೈಜರ್ಸ್ ಮತ್ತು ಪೆಸ್ಟಿಸೈಡ್ಸ್ ಮಾರಾಟಗಾರರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

 

ಎಲ್ಲಾ ರಸಗೊಬ್ಬರಗಳ ಎಂಆರ್‍ಪಿ. ಮೇಲೆ ಎಂಟು ಪರ್ಸೆಂಟ್ ಡೀಲರ್ ಲಾಭಾಂಶವಿರುವಂತೆ ನೋಡಿಕೊಳ್ಳಬೇಕು. ಗೊಬ್ಬರ, ಬೀಜ, ಕೀಟನಾಶಕ ಸ್ಯಾಂಪಲ್ ಕಳಪೆ ಬಂದಾಗ ಕಂಪನಿಯವರ ಮೇಲೆ ಮಾತ್ರ ಕೇಸ್ ಹಾಕಿ ಡೀಲರ್‍ಗಳನ್ನು ಸಾಕ್ಷಿಯಾಗಿ ಪರಿಗಣಿಸಬೇಕು. ಡೀಲರ್‍ಗಳಿಂದ ಸ್ಯಾಂಪಲ್ ಡ್ರಾ ಮಾಡಿದಾಗ ಸ್ಯಾಂಪಲ್ಲಿನ ಹಣವನ್ನು ಕಡ್ಡಾಯವಾಗಿ ಡೀಲರ್‍ಗಳಿಗೆ ಪಾವತಿಸಬೇಕು. ಅಧಿಕಾರಿಗಳು ತಪಾಸಣೆಗಾಗಿ ಅಂಗಡಿಗಳಿಗೆ ಭೇಟಿ ಕೊಟ್ಟ ನಂತರ ಮಾಧ್ಯಮಗಳಿಗೆ ಹೇಳಿಕೆಗಳನ್ನು ಕೊಡುವಾಗ ದಾಳಿ ಎನ್ನುವ ಪದ ಮತ್ತು ಅಂಗಡಿಗಳ ಫೋಟೋಗಳನ್ನು ಬಳಸಬಾರದು. ಎಫ್‍ಐಡಿ. ಮುಖಾಂತರ ಯೂರಿಯಾ ಗೊಬ್ಬರ ಮಾರಾಟ ಮಾಡುವ ಆದೇಶವನ್ನು ಸ್ವಾಗತಿಸುತ್ತೇವೆ. ನೀರಾವರಿ ಮತ್ತು ಒಣ ಬೇಸಾಯಗಾರರಿಗೆ ಬೆಳೆಗಳ ಆಧಾರದ ಮೇಲೆ ರಸಗೊಬ್ಬರ ದೊರೆಯುವಂತೆ ನೋಡಿಕೊಳ್ಳಬೇಕು. ಎಫ್‍ಐಡಿ ಮುಖಾಂತರ ಡಿಎಪಿ ಮತ್ತು ಯೂರಿಯಾ ಮಾರಾಟ ಮಾಡುವುದನ್ನು ಹಿಂಗಾರು ಬೆಳೆಗಳವರೆಗೆ ಕಡ್ಡಾಯಗೊಳಿಸಬೇಕು. ಬೀಜ ಮಾರಾಟ ಯ್ಯಾಪನ್ನು ಮಾರಾಟ ಸ್ನೇಹಿಯಾಗಿ ರೂಪಿಸಬೇಕೆಂದು ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಜಗದೀಶ್, ಸಿದ್ದಲಿಂಗಮೂರ್ತಿ, ಮಂಜುನಾಥ್, ಬಸವರಾಜ್, ಹರ್ಷ, ಅಶೋಕ್, ಗಿರೀಶ್, ತಿಪ್ಪೇಸ್ವಾಮಿ, ಚಿದಾನಂದ, ಮನೋಜ್‍ಕುಮಾರ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...