Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯದಲ್ಲಿ ಗೊಬ್ಬರ ಕೊರತೆ : ಯೂರಿಯಾ ಬಗ್ಗೆ ಮಾಹಿತಿ ನೀಡಿದ ಕೃಷಿ ಸಚಿವರು

---Advertisement---

ಬೆಂಗಳೂರು: ಜೂನ್ – ಜುಲೈ ತಿಂಗಳಲ್ಲಿ ಒಂದಷ್ಟು ಬೆಳೆಗಳನ್ನ ಹಾಕುವುದಕ್ಕೆ ಸರಿಯಾದ ಸಮಯ. ಅದರಲ್ಲೂ ಈ ಸಮಯದಲ್ಲಿ ಭೂಮಿ ಬಿತ್ತನೆ ಮಾಡಿ, ಬೀಜಗಳನ್ನ ಅದಾಗಲೆರ ಬಿತ್ತನೆ ಮಾಡಿರುತ್ತಾರೆ. ರಾಗಿ, ದ್ವಿದಳ ದಾನ್ಯಗಳನ್ನ ಬೆಳೆಯುವವರು ಈ ಸಮಯಕ್ಕಾಗಿ ಕಾಯ್ತಾ ಇರ್ತಾರೆ. ಒಳ್ಳೆ ಮಳೆ ಕೂಡ ಆಗ್ತಾ ಇದೆ. ಆದರೆ ಇದೇ ಸಮಯಕ್ಕೇನೆ ಗೊಬ್ಬರದ ಕೊರತೆಯಾದರೆ ಹೇಗೆ..? ಇದರಿಂದ ರೈತರಿಗೆ ಸಂಕಷ್ಟ ಎದುರಾಗಿದ್ದು, ಚಿಂತೆಯಲ್ಲಿ ಮುಳುಗಿದ್ದಾರೆ. ಸದ್ಯ ರೈತರಿಗೆ ಯಾವ ಥರದ ಗೊಬ್ಬರಗಳು ಸಿಗಲಿವೆ ಎಂಬುದನ್ನ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ರೈತರು ಆತಂಕ ಪಡುವ ಅಗತ್ಯವಿಲಗಲ. ರಾಜ್ಯದಳ್ಇ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ತಿಳಿಸಿದ್ದಾರೆ.

ರೈತರಿಗೆ ಯಾವುದೇ ರೀತಿಯ ತೊಂದರೆಗಳು ಸಂಭವಿಸದಂತೆ ಗಮನ ನೀಡುವುದಕ್ಕೆ ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರ್ಷ ಕಳೆದ ಬಾರಿಗಿಂತ ಬಹಳ ಬೆರಗ ಮುಂಗಾರು ಆರಂಭವಾಗಿದೆ. ಜೊತೆಹೆ ಮುಸುಕಿನ ಜೋಳದ ಪ್ರದೇಶ 2 ಲಕ್ಷ ಎಕ್ಟೇರ್ ವಿಸ್ತರಣೆಯಾಗಿದೆ. ಹೀಗಾಗಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ. ಅಷ್ಟೆ ಅಲ್ಲ ಆತಂಕಗೊಂಡ ರೈತರು ಆಗಸ್ಟ್ – ಸೆಪ್ಟೆಂಬರ್ ಗೆ ಬೇಕಾದ ಗೊಬ್ಬರವನ್ನ ಈಗಲೇ ಖರೀದಿ ಮಾಡಲು ಮುಂದಾಗಿದ್ದಾರೆ. ಹೀಗಾಗಿಯೂ ಬೇಡಿಕೆ ಹೆಚ್ಚಾಗಿರಬಹುದು. ಆದರೆ ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಗೊಬ್ಬರ ಎಲ್ಲಾ ಸಮಯಕ್ಕೂ ಸಿಗಲಿದೆ ಎಂಬ ಭರವಸೆಯನ್ನ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...