Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೂದನೂರಿನಲ್ಲಿ ಸಂಭ್ರಮದ ಗಣೇಶೋತ್ಸವ ಆಚರಣೆ

---Advertisement---

 

ಸುದ್ದಿಒನ್, ಹೂವಿನ ಹಡಗಲಿ : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಜ್ಯೋತಿ ಹವ್ಯಾಸಿ ಕ್ರೀಡಾ ಸಂಘದ ವತಿಯಿಂದ
ಆಗಸ್ಟ್ 27 ರಿಂದ 30 ರ ವರೆಗೂ ಐದು ದಿನಗಳ ಕಾಲ ಅದ್ದೂರಿಯಾಗಿ 48 ವರ್ಷದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಆಗಸ್ಟ್ 27 ರಂದು ಶ್ರೀಮತಿ ತುರಕಾಣಿ ಸಾವಿತ್ರಮ್ಮ ಶ್ರೀ ಸದಾಶಿವಪ್ಪ ಮತ್ತು ಕುಟುಂಬ ವರ್ಗದವರಿಂದ ಕೊಡುಗೆಯಾಗಿ ನೀಡಿದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದರು. ಜೊತೆಗೆ ಮಹಾ ಪ್ರಸಾದದ ವ್ಯವಸ್ಥೆಯನ್ನು ನೆರವೇರಿಸಿದ್ದರು.

ಭಕ್ತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ,
ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಆಕರ್ಷಕ ಮಂಟಪ, ಕಣ್ಣು ಕೋರೈಸುವ ದೀಪಾಲಂಕಾರ ಜನರನ್ನು ಸೆಳೆಯುತ್ತಿದ್ದವು.

ಗ್ರಾಮದೆಲ್ಲೆಡೆ ಗಣೇಶೋತ್ಸವ ಸಂಭ್ರಮ ಮನೆಮಾಡಿದ್ದು ಯಾವ ಬೀದಿಗೆ ಹೋದರೂ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗಳು ಕಾಣುತ್ತಿವೆ. ಜಿನಗುವ ಮಳೆಯ ಮಧ್ಯೆಯೂ ಜನರು ಗಣೇಶನನ್ನು ಸಂಭ್ರಮದಿಂದ ಬರ ಮಾಡಿಕೊಂಡಿದ್ದಾರೆ. ಎಲ್ಲ ಜಾತಿ, ಜನಾಂಗ ಮತ್ತು ಧರ್ಮದವರೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಈ ವೇಳೆ ಪ್ರಸಾದ ವಿತರಣೆ, ಅನ್ನ ಸಂತಪರ್ಪಣೆ ನಡೆಯುತ್ತಿವೆ. ಇಡೀ ಓಣಿಯ ಜನರು ಒಟ್ಟಿಗೆ ಸೇರಿ ಸಂತೋಷದಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದರು. ಆಗಸ್ಟ್ 31 ರಂದು ಗಣೇಶ ವಿಸರ್ಜನೆ ಮಾಡಲಾಗುತ್ತದೆ. ಈ ವೇಳೆ ಭಕ್ತರಿಗೆ ಅನ್ನ ಸತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದೆ. ಜ್ಯೋತಿ ಹವ್ಯಾಸಿ ಕ್ರೀಡಾ ಸಂಘದ ಅಧ್ಯಕ್ಷರು,ಉಪಾಧ್ಯಕ್ಷರು ಸಂಘದ ಮಾಜಿ ಮತ್ತು ಹಾಲಿ ಸರ್ವ ಸದಸ್ಯರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment