Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಚಿತ್ರದುರ್ಗಕ್ಕೆ ತುಮಕೂರಿನ ವೀರವನಿತೆ ಒನಕೆ ಓಬವ್ವ ಮಹಿಳಾ ಬಳಗದ ಐವತ್ತು ಮಂದಿ ಮಹಿಳೆಯರು ಆಗಮನ

---Advertisement---

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.21 : ಚಾರಿತ್ರಿಕ ನಗರ ಚಿತ್ರದುರ್ಗಕ್ಕೆ ತುಮಕೂರಿನ ವೀರವನಿತೆ ಒನಕೆ ಓಬವ್ವ ಮಹಿಳಾ ಬಳಗದ ಸುಮಾರು ಐವತ್ತು ಮಂದಿ ಮಹಿಳೆಯರು ನಾಳೆ ( ಶುಕ್ರವಾರ )ಬೆಳಿಗ್ಗೆ 11 ಗಂಟೆಗೆ ಆಗಮಿಸಲಿದೆ ಎಂದು ಒನಕೆ ಓಬವ್ವ ವಂಶಸ್ಥರಾದ ಶ್ರೀಮತಿ ಸುವರ್ಣ ರಾಜಶೇಖರ್ ತಿಳಿಸಿದ್ದಾರೆ.

ಚಿತ್ರದುರ್ಗ ಕೋಟೆಯನ್ನು ರಕ್ಷಣೆ ಮಾಡಿದ ವೀರ ವನಿತೆ ಒನಕೆ ಓಬವ್ವ ಅವರ ಹೆಸರನ್ನು ಶಾಶ್ವತವಾಗಿ ಉಳಿಸಿ ಆಕೆಯ ಶಕ್ತಿ . ಪರಾಕ್ರಮ  ಮತ್ತು ಹೋರಾಟ ಇನ್ನಿತರೆ ವಿಚಾರಗಳನ್ನು ಸಮಾಜಕ್ಕೆ ತಿಳಿಸಿಕೊಡುವ ಜೊತೆಗೆ ಸಮಾಜದಲ್ಲಿ ಮಹಿಳಾ ಶಕ್ತಿ ಗಟ್ಟಿಗೊಳಿಸುವ ಉದ್ದೇಶ ಹೊಂದಿರುವ ಈ ಸಂಘಟನೆ ಇಂದು ದುರ್ಗಕ್ಕೆ ಭೇಟಿ ನೀಡಿ ಒನಕೆ ಓಬವ್ವ ಅವರ ಪ್ರತಿಮೆಗೆ ಪುಷ್ಪ ಮಾಲಾರ್ಪ ನೆ  ಮಾಡಲಿದ್ದಾರೆ.

ಬಳಿಕ ಕೋಟೆಯ ಒನಕೆ ಓಬವ್ವ ನ ಕಿಂಡಿ ವೀಕ್ಷಿಸಿ ಅವರ ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ
ಈ ಬಳಗದ ಅಧ್ಯಕ್ಷರಾದ ಶ್ರೀಮತಿ ವಿಜಯ ಲಕ್ಷ್ಮೀ  ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಭಾಗವಹಿಸುವರು ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment