Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಟಿಕೆಟ್ ಗಾಗಿ ಫೈಟ್ : ಶಾಮನೂರು ಶಿವಶಂಕರಪ್ಪ ಅಥವಾ ಹೊಸಬರಿಗೆ ಸಿಗಲಿದೆಯಾ ಟಿಕೆಟ್

---Advertisement---

ದಾವಣಗೆರೆ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯೂ ಬೆಳೆಯುತ್ತಿದೆ. ದಾವಣಗೆರೆಯಲ್ಲೂ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಾಗುತ್ತಿದೆ. ಕಾಂಗ್ರೆಸ್ ನಲ್ಲಿ ಸಚುವ ಎಸ್ ಎಸ್ ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಇನ್ ಸೈಟ್ಸ್ ಐಎಎಸ್ ಕೋಚಿಂಗ್ ಸೆಂಟರ್ ನ ಸಂಸ್ಥಾಪಕ ವಿನಯ್ ಕುಮಾರ್ ಅವರ ಹೆಸರು ಹೆಚ್ಚು ಪ್ರಚಲಿತವಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಯುವ ನಾಯಕ ನಿಖಿಲ್ ಕೊಂಡಜ್ಜಿ ಹೆಸರು ತೆರೆಮರೆಯಲ್ಲಿ ಓಡಾಡುತ್ತಿದೆ.

 

ಇತ್ತ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ವಿನಯ್ ಕುಮಾರ್, ಈಗಾಗಲೇ ಪ್ರಚಾರ ಕಾರ್ಯದಲ್ಲೂ ತೊಡಗಿಕೊಂಡಿದ್ದಾರೆ. ಕುರುಬ ಸಮುದಾಯದವರೇ ಆಗಿರುವ ವಿನಯ್ ಕುಮಾರ್ ಅವರು, ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೂ ಈಗಾಗಲೇ ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ದಾವಣಗೆರೆಯಾದ್ಯಂತ ಪ್ರಚಾರದಲ್ಲಿ ತೊಡಗಿದ್ದಾರೆ.

ಇನ್ನು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಸ್ಥರಲ್ಲಿಯೂ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಶಿವಶಂಕರಪ್ಪ ಅವರ ಸೊಸೆ ಡಾ. ಪ್ರಭಾ ಮಲ್ಲಿಕಾರ್ಜುನ ಅವರು ಈಗಾಗಲೇ ಕ್ಷೇತ್ರದಲ್ಲಿ ಸಂಚಾರ ಕಾರ್ಯ ಆರಂಭಿಸಿದ್ದಾರೆ. ಕುಟುಂಬಸ್ಥರಿಂದ ಈಗಾಗಲೇ ಟಿಕೆಟ್ ಗಾಗಿ ಲಾಭಿ ನಡೆಯುತ್ತಿದೆ. ಈ ಸಂಬಂಧ ಡಾ.ಪ್ರಭಾ ಮಲ್ಲಿಕಾರ್ಜುನ ಮಾತನಾಡಿ, ಟಿಕೆಟ್ ಗೆ ತಲೆಕೆಡಿಸಿಕೊಂಡಿಲ್ಲ. ಮನೆ ಮನೆಗೆ ಆರೋಗ್ಯ ಸೇವೆ ನೀಡಬೇಕು ಎಂಬ ಕಲ್ಪನೆಯೊಂದಿಗೆ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಪಾಗುತ್ತಿದೆ. ಲೋಕಸಭಾ ಚುನಾವಣೆಯ ಅಜೆಂಡಾ ಇಟ್ಟುಕೊಂಡು ಈ ಕೆಲಸಗಳ‌ನ್ನು ಮಾಡುತ್ತಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment