ಡಿಕೆ ಶಿವಕುಮಾರ್ ಹಾಗೂ ಮಧು ಬಂಗಾರಪ್ಪ ವಿರುದ್ಧ ದೂರು ದಾಖಲು : ಕಾರಣ ಏನು ಗೊತ್ತಾ..?

suddionenews
1 Min Read

 

 

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈಗಾಗಲೇ ಪಕ್ಷಗಳು ತಮ್ಮ ಪ್ರಚಾರದ ಕಾರ್ಯವನ್ನು ಶುರು ಮಾಡಿದ್ದಾರೆ. ಆದರೆ ಜೆಡಿಎಸ್ ನಾಯಕರು, ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ್ದು, ಸರ್ಕಾರಿ ಅಧಿಕಾರಿಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಮತ್ತು ಮಧು ಬಂಗಾರಪ್ಪ, ಶಿಕ್ಷಣ ಮಂತ್ರಿಗಳು ಇವರುಗಳು ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯ 3 ಜಿಲ್ಲೆಗಳಾದ ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಯ ಡಿಡಿಪಿಐಗಳು ಮತ್ತು ಬಿ.ಇ.ಓ.ಗಳನ್ನು ಗೌಪ್ಯವಾಗಿ ಸಭೆ ಸೇರಿಸಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಾಕಿಸುವಂತೆ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರು ಕೆ.ಆರ್. ಸರ್ಕಲ್‌ನಲ್ಲಿ 3 ಜಿಲ್ಲೆಯ ಡಿ.ಡಿ.ಪಿ.ಐ. ಮತ್ತು ಬಿ.ಇ.ಓ.ಗಳನ್ನು ಕರೆದು ಸಭೆ ಮಾಡಿರುತ್ತಾರೆ. ಡಿ.ಕೆ. ಶಿವಕುಮಾರ್‌ರವರು ತಮ್ಮ ಮನೆಯಲ್ಲಿ ರಾತ್ರಿ 7 ಗಂಟೆಗೆ ಬೆಂಗಳೂರು ನಗರ ಉತ್ತರ ಮತ್ತು ದಕ್ಷಿಣ, ರಾಮನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿ.ಡಿ.ಪಿ.ಐ.. ಬಿ.ಓ.. ಮತ್ತು ಶಿಕ್ಷಣ ಇಲಾಖೆಯ ಕೆಲವು ಅಧಿಕಾರಿಗಳನ್ನು ಕರೆದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಮತ ಹಾಕಿಸುವಂತೆ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ.

ಕರ್ನಾಟಕ ಸರ್ಕಾರ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡು ಪರೋಕ್ಷವಾಗಿ ಮತದಾರರನ್ನು ಓಲೈಸುವ ಪ್ರಯತ್ನ ಮಾಡಿರುತ್ತಾರೆ. ಇದು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ. ಆದ್ದರಿಂದ. ಸಭೆಯನ್ನು ಮಾಡದಂತೆ ಮತ್ತು ಸಂಬಂಧಪಟ್ಟವರಿಗೆ ಹಾಗೂ ಚುನಾವಣಾ ಅಕ್ರಮ ಮಾಡದಂತೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಜೆಡಿಎಸ್‌ ಆಗ್ರಹಿಸಿದೆ.

Share This Article
Leave a Comment

Leave a Reply

Your email address will not be published. Required fields are marked *