Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರಕಾಶ್ ರೈ ವಿರುದ್ಧ ಬಾಗಲಕೋಟೆಯಲ್ಲಿ ದೂರು ದಾಖಲು..!

---Advertisement---

 

ಬಾಗಲಕೋಟೆ: ಪ್ರಕಾಶ್ ರೈ ಆಗಾಗ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಲೇ ಇರುತ್ತಾರೆ. ಈಗಾಗಲೇ ಹಲವು ಕೇಸ್ ಗಳು ಅವರ ಮೇಲಿದೆ. ಇದೀಗ ಬಾಗಲಕೋಟೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ. ಚಂದ್ರಯಾನ 3ರ ಬಗ್ಗೆ ವ್ಯಂಗ್ಯವಾಡಿ, ಪೋಸ್ಟ್ ಮಾಡಿದ್ದರು. ಆ ಸಂಬಂಧ ಈಗ ದೂರು ದಾಖಲಾಗಿದೆ.

ಚಂದ್ರಯಾನ 3 ಯಶಸ್ವಿಯಾಗುವುದಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಇದೆ. ಹೀಗಿರುವಾಗ ಚಂದ್ರಯಾನ 3 ಬಗ್ಗೆ ವ್ಯಂಗ್ಯವಾಡಿದ್ದ ಪ್ರಕಾಶ್ ರೈ, ಇಸ್ರೋ ಮಾಜಿ ಮುಖ್ಯಸ್ಥ ಕೆ ಶಿವನ್, ಚಹಾವನ್ನು ಸುರಿಯುತ್ತಿರುವ ಫೋಟೋ ಹಂಚಿಕೊಂಡಿದ್ದರು. ಇದು ಸಾಕಷ್ಟು ಟೀಕೆಗೂ ಗುರಿಯಾಗಿತ್ತು. ಪ್ರಕಾಶ್ ರೈ ಅವರ ವಿರುದ್ಧ ಹಲವರು ಮುಗಿಬಿದ್ದಿದ್ದರು.

ಈ ಸಂಬಂಧ ಬಾಗಲಕೋಟೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಿಂದೂ ಸಂಘಟನೆ ಮುಖಂಡ ನಂದು ಗಾಯಕವಾಡ ಹಾಗೂ ಇತರರು ದೂರು ನೀಡಿದ್ದಾರೆ. ‘ಪ್ರಕಾಶ್ ರೈ ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನ ಬಂಧಿಸಬೇಕು. ಇಸ್ರೋ ಕಳುಹಿಸಿರುವ ಚಂದ್ರಯಾನ‌ ನೌಕೆಯಿಂದ ಭಾರತದ ಶಕ್ತಿ ಇಮ್ಮಡಿ ಆಗಿದೆ. ಈ ಬಗ್ಗೆ ನಮ್ಮ ವಿಜ್ಞಾನಿಗಳನ್ನು ಎಲ್ಲರೂ ಹೊಗಳುತ್ತಿದ್ದಾರೆ. ಆದರೆ, ಪ್ರಕಾಶ್ ರಾಜ್ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದೇವೆ’ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...