Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮೈಕ್ರೋ ಫೈನಾನ್ಸ್ ಕಿರುಕುಳ ನೀಡಿದಲ್ಲಿ ಎಫ್.ಐ.ಆರ್ ದಾಖಲಿಸಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

---Advertisement---

ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು  ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್‌ಐಆರ್ ದಾಖಲಿಸುವಂತೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

 

ಗುರುವಾರ (ಜ.30) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಕಿರುಹಣಕಾಸು ಸಂಸ್ಥೆಗಳು, ಬ್ಯಾಂಕೇತರ ಹಣಕಾಸು ಸಂಸ್ಥೆಗಳು, ಸಾಲ ವಿತರಣೆ ಮತ್ತು ಮರುಪಾವತಿ ಪ್ರಕ್ರಿಯೆಗಳಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಸಲಹೆ ಮತ್ತು ಸೂಚನೆಗಳ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳು ನ್ಯಾಯಬದ್ಧವಾಗಿ ವ್ಯವಹರಿಸಲಿ, ಆದರೆ ಕಿರುಕುಳ ಮರುಕಳಿಸಿದರೆ ಸ್ವಯಂ ಹಿತಾಸಕ್ತಿಯಿಂದ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದರು.

ಸಾಲವನ್ನು ನೀಡುವಾಗ ಸಾಲ ಪಡೆಯುವ ವ್ಯಕ್ತಿಯ ಮತ್ತು ಕುಟುಂಬದ ಒಟ್ಟು ವಾರ್ಷಿಕ ಆದಾಯವನ್ನು ಪರಿಗಣಿಸಬೇಕು. ಮಾಸಿಕ ಒಟ್ಟು ಆದಾಯದ ಶೇ 50 ರಷ್ಟು ಮೊತ್ತವನ್ನು ಮಾತ್ರ ಸಾಲ ಮರುಪಾವತಿ ಸಾಮರ್ಥ್ಯ ಎಂದು ಪರಿಗಣಿಸಬೇಕು. ವ್ಯಕ್ತಿಯು ಬೇರೆಯ ಮೂಲಗಳಿಂದ ಈಗಾಗಲೇ ಪಡೆದಿರುವ ಸಾಲದ ಮರುಪಾವತಿ ಕಂತಿನ ಮೊತ್ತವು. ಆದಾಯದ ಮೂಲಕ್ಕಿಂತ ಶೇ. 50 ರಷ್ಟು ಮೀರುತ್ತಿದ್ದರೆ, ಅಂತಹ ವ್ಯಕ್ತಿಗೆ ಸಾಲ ನೀಡುವಂತಿಲ್ಲ. ಒಂದೊಮ್ಮೆ ನೀಡದರೆ, ಅದು ಮೈಕ್ರೋ ಪೈನಾನ್ಸ್ ಕಂಪನಿ ಕಡೆಯಿಂದ ಆದ ಲೋಪ ಎಂದು ಹೇಳಲಾಗುವುದು. ಜನರಿಗೆ ಅವರ ಅಗತ್ಯಕ್ಕಿಂತ ಹೆಚ್ಚಾಗಿ ಸಾಲವನ್ನು ನೀಡುತ್ತಿದ್ದಾರೆ. ಸಾಲ ಮರುಪಾವತಿಲು ನಿಮ್ಮ ಚೌಕಟ್ಟುನ್ನು ಮೀರಿ ಅವರಿಗೆ ತೊಂದರೆ ನೀಡುತ್ತಿದ್ದಿರಿ. ಇದರ ಬಗ್ಗೆ ಪ್ರಕರಣ ದಾಖಲು ಮಾಡಲಾಗುವುದು. ಗ್ರಾಮೀಣ ಭಾಗದ ಜನರಿಗೆ ಸಾಲದ ಅವಶ್ಯಕತೆ ತುಂಬಾ ಇರುವುದರಿಂದ ಆರ್.ಬಿ.ಐ ನಿಯಮಾನುಸಾರ ಸಾಲ ನೀಡಿ, ಅವರ ಅಗತ್ಯಕ್ಕೆ ತಕ್ಕಂತೆ ಸಾಲ ನೀಡಬೇಕು ಎಂದರು. ಸಾರ್ವಜನಿಕರಿಗೆ ನಿಮ್ಮ ಪೈನಾನ್ಸ್ ಕಂಪನಿಯ ಬಡ್ಡಿ ಎಷ್ಟು ಅಂತ ತಿಳಿಸಿ, ಮೈಕ್ರೋ ಫೈನಾನ್ಸ್  2 ಲಕ್ಷ ರೂ ವರೆಗೆ ಮಾತ್ರ ಸಾಲ ನೀಡಲು ಅವಕಾಶವಿದೆ. ಸಾಲ ನೀಡುವ ಸಂಧರ್ಭದಲ್ಲಿ ಅರ್ಜಿ ಹಾಗೂ ಷರತ್ತುಗಳು ಕನ್ನಡದಲ್ಲಿರಬೇಕು.
ಸಾಲ ಮತ್ತು ಬಾಕಿ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದ ವ್ಯಕ್ತಿಯ ಕುಟುಂಬದ ಯಾವ ವ್ಯಕ್ತಿಗಳನ್ನು ಕೆವೈಸಿ ಕೇಳುವಂತಿಲ್ಲ. ಬಾಕಿ ಪಾವತಿ ಮಾಡಿ ಎಂದು ಒತ್ತಾಯಿಸುವಂತಿಲ್ಲ. ಅತ್ಯಂತ ಕಡಿಮೆ ಮೊತ್ತದ ಸಾಲವಾದರೂ ವಿಮೆ ಮಾಡಿಸಬೇಕು. ಸಾಲ ಪಡೆದ ವ್ಯಕ್ತಿಯು ಮೃತಪಟ್ಟಲ್ಲಿ ವಿಮೆಯ ಮೂಲಕ ಸಾಲದ ಮೊತ್ತವನ್ನು ಪಡೆಯಬೇಕು. ಬಡ್ಡಿ ದರ ಗರಿಷ್ಠ ಶೇ. 18 ರಷ್ಟು ಮಾತ್ರ, ಇದಕ್ಕಿಂತ ಹೆಚ್ಚಿನ ಬಡ್ಡಿದರ ವಸೂಲಿ ಮಾಡುವಂತಿಲ್ಲ.
ವಸೂಲಿ ಸಿಬ್ಬಂದಿ ಬೆದರಿಕೆ ಹಾಕಬಾರದು, ಬೈಗುಳ-ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು.  ಸಾಲ ಪಡೆದವರಿಗೆ ಪದೇ ಪದೇ ಕರೆ ಮಾಡಬಾರದು. ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯ ಒಳಗೆ ಮಾತ್ರ ಕರೆ ಮಾಡಬೇಕು. ಸಾಲ ಪಡೆದ ವ್ಯಕ್ತಿಯ ಕುಟುಂಬದವರು, ಸಂಬಂಧಿಕರು, ಸ್ನೇಹಿತರು ಮತ್ತು ಸಹದ್ಯೋಗಿಗಳಿಗೆ ಕರೆ ಮಾಡುವಂತಿಲ್ಲ.  ಸಾಲ ಪಡೆದವರ ಹೆಸರು ಮತ್ತು ವಿವರಗಳನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಪ್ರದರ್ಶಿಸುವಂತಿಲ್ಲ.  ಸಾಲ ಪಡೆದ ಕುಟುಂಬದವರ ಮೇಲೆ ಹಲ್ಲೆ ನಡೆಸುವಂತಿಲ್ಲ. ಯಾವುದೇ ರೀತಿಯ ಕಿರುಕುಳ ನೀಡುವಂತಿಲ್ಲ. ಗೌರವಕ್ಕೆ ಧಕ್ಕೆ ತರುವಂತಹ ಯಾವುದೇ ಕೃತ್ಯವನ್ನು ಎಸಗುವಂತಿಲ್ಲ. ಸಾಲ ಪಡೆದವರ ಆಸ್ತಿ-ಸ್ವತ್ತುಗಳಿಗೆ ಹಾನಿ ಮಾಡುವಂತಿಲ್ಲ. ಬಾಕಿ ಪಾವತಿ ಮಾಡದೇ ಇದ್ದಾಗ ಎದುರಾಗಬಹುದಾದ ಪರಿಸ್ಥಿತಿಯ ಬಗ್ಗೆ ಸುಳ್ಳು ಮಾಹಿತಿ ನೀಡಬಾರದು. ತಡವಾಗಿ ಕಂತು ಪಾವತಿಸಿದ್ದಾರೆ ಎಂಬ ಕಾರಣಕ್ಕೆ ಅವರಿಗೆ ಬಡ್ಡಿ ಹಾಕುವಂತಿಲ್ಲ. ಸಾಲ ವಸೂಲಿಗೆ ರೌಡಿಗಳನ್ನು ಬಿಟ್ಟು ದಬ್ಬಾಳಿಕೆ ಮಾಡುವಂತಿಲ್ಲ. ಆರ್.ಬಿ.ಐ ನಿಯಾಮಾನುಸಾರ ಕ್ರಮ ಕೈಗೊಳ್ಳಬೇಕು ಎಂದರು. ಫೆನಾನ್ಸ್ ಕಂಪನಿಯವರು ಯಾವುದೇ ಕಾರಣಕ್ಕೂ ಆಧಾರ್ ಕಾರ್ಡ್ ತೆಗೆದುಕೊಳ್ಳಬಾರದು.  ಪಾನ್ ಬ್ರೋಕರ‍್ಸ್ ತಮ್ಮ ಅಂಗಡಿಗಳ ಮುಂದೆ ಸಿಸಿಟಿವಿ ಹಾಕಿಸಿ ನಿಮ್ಮಿಂದಲೂ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ  ಜಗಳೂರು, ಮಾಯಕೊಂಡ, ಹೊನ್ನಾಳಿಯಿಂದ ಸಾಕಷ್ಟು ದೂರುಗಳು ಬಂದಿರುತ್ತವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿರುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತಾನಾಡಿ, ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿಮೀರಿದೆ. ಸಾಕಷ್ಟು ಜನ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.  ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ.  ಕಿರುಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಸಾಲ ವಿತರಣೆ ಮತ್ತು ಮರಪಾವತಿಯಲ್ಲಿ ಗ್ರಾಹಕರನ್ನು ಹಾಗೂ ಸಿಬ್ಬಂದಿಗಳನ್ನು ಗೌರವದಿಂದ ನೋಡಿಕೊಳ್ಳುವುದು. ಕಂತು ಕಟ್ಟಲು ತಪ್ಪಿದ ಗ್ರಾಹಕರೊಂದಿಗೆ ವ್ಯವಹರಿಸಲು ಆರ್.ಬಿ.ಐ ನಿರ್ದೇಶಗಳನ್ನು ಪಾಲಿಸುವುದು, ಗ್ರಾಹಕ ಸ್ನೇಹಿ ಮತ್ತು ನ್ಯಾಯಸಮ್ಮತವಾಗಿರಬೇಕು. ನೀವು ಸೂಕ್ತವಲ್ಲದ ಸಮಯದಲ್ಲಿ ಗ್ರಾಹಕರನ್ನು ಸಂಪರ್ಕ ಮಾಡುವುದಾಗಲಿ ಅಥವಾ ಸಾಲ ವಸೂಲಾತಿ ಮಾಡಬಾರದು. ಅವರ ಮನೆಯಲ್ಲಿ ಮೃತ್ಯು ಸಂಭವಿಸಿದಾಗ, ಅನಾರೋಗ್ಯದ ಸಂದರ್ಭದಲ್ಲಿ ಸಾಲ ಮಸೂಲಾತಿ ಮಾಡಬಾರದು. ಪ್ರತಿಯೊಂದು ಕಿರುಹಣಕಾಸು ಸಂಸ್ಥೆಯೂ  ಸಾಲಗಾರರೊಂದಿಗೆ ಸಂವಹನ ಮಾರ್ಗದರ್ಶನ ನೀಡಬೇಕೆಂದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಸಿದ್ದಾರ್ಥ ಆಚಾರ್ಯ, ಡಿವೈಎಸ್‌ಪಿ ಬಸವರಾಜ, ಚನ್ನಗಿರಿ ಉಪವಿಭಾಗದ ಎಎಸ್ಪಿ ಶ್ಯಾಮ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...