ಚಿತ್ರದುರ್ಗ: ಡಾನ್ ಜಯರಾಜ್ ಜೀವನಗಾಥೆಯನ್ನು ಡಾಲಿ ಧನಂಜಯ್ ಹೆಡ್ ಬುಷ್ ಸಿನಿಮಾ ಮೂಲಕ ತೆರೆ ಮೇಲೆ ತಂದಿದ್ದು, ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಆದರೆ ಇದೀಗ ಚಿತ್ರತಂಡದ ವಿರುದ್ಧ ಕೇಸ್ ದಾಖಲಿಸಲಾಗಿದೆ. ಸಿನಿಮಾದಲ್ಲಿ ಡಾನ್ ಜಯರಾಜ್ ವೀರಗಾಸೆ ಹಾಕಿಕೊಂಡವರ ಮೇಲೆ ಹಲ್ಲೆ ಮಾಡಿದಂತೆ ತೋರಿಸಲಾಗಿದೆ. ಇದರಿಂದ ವೀರಗಾಸೆಗೆ ಅವಮಾನ ಆಗಿದೆ. ಈ ದೃಶ್ಯವನ್ನು ತೆಗೆಸಬೇಕು ಎಂದು ಹಿಂದೂ ಸಂಘಟನೆಗಳು ಇದೀಗ ದೂರು ದಾಖಲಿಸಿವೆ.
ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಹಿರಿಯೂರು ನಗರ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿದ ಬಳಿಕ ಮಾತನಾಡಿದ ಹಿಂದೂ ಕಾರ್ಯಕರ್ತರು “ಹೆಡ್ ಬುಷ್ ಚಿತ್ರದಲ್ಲಿ ವೀರಭದ್ರನ ಅವತಾರವಾಗಿರುವ ವೀರಗಾಸೆ ವೇಷ ದಾರಿಗಳನ್ನು ನಟ ಡಾಲಿ ಧನಂಜಯ ಮನಬಂದಂತೆ ಕಾಲಿನಲ್ಲಿ ಒದ್ದಿರುವ ದೃಶ್ಯ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಹಿರಿಯೂರು ನಗರ ಸಿಪಿಐ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…