Connect with us

Hi, what are you looking for?

ಪ್ರಮುಖ ಸುದ್ದಿ

ಕಿಚ್ಚ ಸುದೀಪ ಫ್ಯಾಂಟಂಗಾಗಿ ಸೃಷ್ಟಿಯಾಗಿದೆ ಬೃಹತ್ ಕಾಡು!

ಬೆಂಗಳೂರು : ಹೈದರಾಬಾದಿನಲ್ಲಿ ಶೂಟಿಂಗ್ ಶುರು…ಖ್ಯಾತ ನಿರ್ಮಾಪಕ ಜಾಕ್ ಮಂಜು ನಿರ್ಮಾಣದಲ್ಲಿ, ಅನೂಪ್ ಭಂಡಾರಿ ನಿರ್ದೇಶಿಸುತ್ತಿರುವ, ಕಿಚ್ಚ ಸುದೀಪ ನಟನೆಯ ಚಿತ್ರ ಫ್ಯಾಂಟಂ. ಕೊರೋನಾ ಕಂಟಕದ ನಡುವೆಯೂ ಯಾವುದೇ ಅಡೆ ತಡೆ ಇಲ್ಲದೆ ಎರಡನೇ ಹಂತದ ಚಿತ್ರೀಕರಣಕ್ಕೆ ಫ್ಯಾಂಟಂ ಟೀಂ ಅಣಿಯಾಗುತ್ತಿದೆ. ಹಾಗೆ ನೋಡಿದರೆ, ಕೋವಿಡ್-19 ನಿಂದ ಎದುರಾದ ಸಂಕಷ್ಟದ ನಡುವೆಯೂ, ಚಿತ್ರೀಕರಣಕ್ಕೆ ಅವಕಾಶ ದೊರೆತ ನಂತರ ಫಸ್ಟ್ ಶೂಟಿಂಗ್ ಆರಂಭಿಸಿದ ಭಾರತೀಯ ಸಿನಿಮಾ ಫ್ಯಾಂಟಂ.

ಇಂಥಾ ಸಂದಿಗ್ಧ ಸಮಯದಲ್ಲಿ ಇರುವ ಲೊಕೇಷನ್ನುಗಳಲ್ಲಿ ಚಿತ್ರೀಕರಿಸಲೂ ಚಿತ್ರೋದ್ಯಮದ ಮಂದಿ ಭಯ ಪಡುತ್ತಿದ್ದಾರೆ. ಆದರೆ, ಫ್ಯಾಂಟಂ ಚಿತ್ರಕ್ಕಾಗಿ ನಿರ್ಮಾಪಕ ಜಾಕ್ ಮಂಜು ದೊಡ್ಡ ಮಟ್ಟದ ಧೈರ್ಯ ಮಾಡಿದ್ದಾರೆ. ಅದೇನೆಂದರೆ, ಜೂನ್ ತಿಂಗಳಿನಿಂದಲೇ ಹೈದರಾಬಾದಿನ ಅನ್ನಪೂರ್ಣ ಸ್ಟುಡಿಯೋದಲ್ಲಿ ಫ್ಯಾಂಟಂಗಾಗಿ ಸೆಟ್ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಅದೂ ಅಂತಿಂತಾ ಸೆಟ್ ಅಲ್ಲ, ಬೃಹತ್ ಕಾಡನ್ನು ಈ ಸ್ಟುಡಿಯೋದಲ್ಲಿ ರೂಪಿಸಲಾಗುತ್ತಿದೆ. ಕಾಡಿನ ನಡುವೆ ಧುಮ್ಮಿಕ್ಕುವ ಜಲಪಾತ, ಶಿಥಿಲಗೊಂಡ ಸೇತುವೆ, ಅಲ್ಲಲ್ಲಿ ಪಾಳುಬಿದ್ದ ಮನೆ, ಗುಡಿಸಲುಗಳು – ಥೇಟು ದಟ್ಟ ಅರಣ್ಯವೇ ನಾಚುವಂತಾ ಸೆಟ್ಟನ್ನು ಇಲ್ಲಿ ಸೃಷ್ಟಿಸಲಾಗಿದೆ.

ಇದಕ್ಕಾಗಿ ಬರೋಬ್ಬರಿ ಐದು ಲಕ್ಷ ಗಿಡಗಳನ್ನು ಆಮದುಮಾಡಿಕೊಳ್ಳಲಾಗಿದೆ. ಮೂರು ಫ್ಲೋರ್ಗಳಲ್ಲಿ ನಿರ್ಮಾಣಗೊಂಡಿರುವ ಸೆಟ್ ರೂಪಿಸುವ ಕಾರ್ಯಕ್ಕೆ ಸುಮಾರು ನೂರೈವತ್ತು ಜನ ಕಲಾವಿದರು, ತಂತ್ರಜ್ಞರು ಇದಕ್ಕಾಗಿ ಶ್ರಮಿಸಿದ್ದಾರೆ. ಕೋವಿಡ್ ಸಮಸ್ಯೆ ಇರುವುದರಿಂದ ನುರಿತ ವೈದ್ಯರನ್ನು ನೇಮಿಸಿಕೊಂಡು ಸೆಟ್ ಕೆಲಸವನ್ನು ಪೂರ್ಣಗೊಳಿಸಲಾಗಿದೆ.

ಫ್ಯಾಂಟಂ ಚಿತ್ರಕ್ಕಾಗಿ ಕಿಚ್ಚ ಸುದೀಪ ತಿಂಗಳುಗಟ್ಟಲೆ ಕಸರತ್ತು ನಡೆಸಿ ಸಿಕ್ಸ್ ಪ್ಯಾಕ್ ದೇಹವನ್ನು ಹುರಿಗೊಳಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ತೀರಾ ಹೊಸ ಬಗೆಯಲ್ಲಿ ಕಾಣಿಸಿಕೊಳ್ಳಬೇಕು ಅಂತಾ ಸ್ವತಃ ಕಿಚ್ಚ ತೀರ್ಮಾನಿಸಿದ್ದಾರೆ. ಈ ಕಾರಣಕ್ಕೇ ನಿರ್ದೇಶಕ ಅನೂಪ್ ಭಂಡಾರಿ ಕಲ್ಪನೆಗೆ ತಕ್ಕಂತೆ ತಯಾರಾಗಿದ್ದಾರೆ. ವಿಕ್ರಾಂತ್ ರೋಣನಾಗಿ ಫ್ಯಾಂಟಂ ಚಿತ್ರದಲ್ಲಿ ಸುದೀಪ್ ಅವತಾರವೆತ್ತಲಿದ್ದಾರೆ.

ಸೆಟ್ ಹಾಗಯೇ ಆರು ಕೋಟಿಗೂ ಅಧಿಕ ಹಣ ಖರ್ಚು ಮಾಡಿರುವ ಜಾಕ್ ಮಂಜು ಇಡೀ ಸಿನಿಮಾವನ್ನು ದೊಡ್ಡ ಬಜೆಟ್ಟಿನಲ್ಲೇ ನಿರ್ಮಿಸುತ್ತಿದ್ದಾರೆ.
ಇಂದು ಬೆಳಿಗ್ಗೆ ಸರಳವಾಗಿ ಪೂಜೆ ನೆರವೇರಿಸುವ ಮೂಲಕ ಹೈದ್ರಾಬಾದಿನಲ್ಲಿ ಫ್ಯಾಂಟಂ ಚಿತ್ರದ ಶೂಟಿಂಗ್ ಆರಂಭವಾಗಿದೆ. ಸಾಮಾನ್ಯವಾಗಿ ಹೊರ ರಾಜ್ಯಗಳಲ್ಲಿ ಚಿತ್ರೀಕರಣ ನಡೆದಾಗ ಅಲ್ಲಿನ ಕಾರ್ಮಿಕರಿಗೆ ಕೆಲಸ ನೀಡುವುದು ವಾಡಿಕೆ. ಆದರೆ ಈ ಸಲ ಸುದೀಪ್ ಅವರ ಆಜ್ಞೆಯಂತೆ ಸರಿಸಮಾರು ಇನ್ನೂರೈವತ್ತು ಮಂದಿ ಕಾರ್ಮಿಕರನ್ನು ಬೆಂಗಳೂರಿನಿಂದಲೇ ಕರೆದುಕೊಂಡು ಹೋಗಿ ಉದ್ಯೋಗ ನೀಡಲಾಗಿದೆ. ಈ ಚಿತ್ರದ ಕುರಿತಾಗಿ ಇನ್ನೂ ಸಾಕಷ್ಟು ಕುತೂಹಲಕಾರಿ ವಿಚಾರಗಳಿದ್ದು ಅವೆಲ್ಲವೂ ಹಂತಹಂತವಾಗಿ ಹೊರಬರಲಿದೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಡಿಸೆಂಬರ್‍ವರೆಗೂ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಸಿಎಂ ಹೇಳಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶೀಘ್ರವೇ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ...

ಪ್ರಮುಖ ಸುದ್ದಿ

ಬೆಂಗಳೂರು: ಇಂದು ಶಾಲೆಗಳನ್ನು ಪ್ರಾರಂಭ ಮಾಡುವ ವಿಚಾರಕ್ಕೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ...

ಪ್ರಮುಖ ಸುದ್ದಿ

ಬೆಂಗಳೂರು :ತಜ್ಞರ ಅಭಿಪ್ರಾಯದಂತೆ ಡಿಸೆಂಬರ್‌ವರೆಗೆ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದರೂ ಸಹ ಶಾಲೆ ಪ್ರಾರಂಭಿಸಲು ಡಿಸೆಂಬರ್ ಸಹ ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

ಪ್ರಮುಖ ಸುದ್ದಿ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ನಿವಾಸದ ಮೇಲೆ ಬೆಳಗಿನ ಜಾವ ದಾಳಿ ನಡೆದಿದೆ. ದೆಹಲಿ ಮೂಲದ ಹದಿಮೂರು ಅಧಿಕಾರಿಗಳ ತಂಡ ದಾಳಿ...

error: Content is protected !!