Connect with us

Hi, what are you looking for?

ಪ್ರಮುಖ ಸುದ್ದಿ

ಪ್ರಚಂಡ ಪುಟಾಣಿಗಳ ಜೊತೆಯಾದರು ನಟ ಶಶಿಕುಮಾರ್!

ಬೆಂಗಳೂರು : ಡಿ ಅಂಡ್ ಡಿ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್ ನ ಅಡಿಯಲ್ಲಿ ಶ್ರೀಮತಿ ಪದ್ಮಾವತಿಯವರು ನಿರ್ಮಿಸುತ್ತಿರುವ ಪ್ರಚಂಡ ಪುಟಾಣಿಗಳು ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದೆ.

ಕೋಲಾರದ ನರಸಾಪುರದ ಗುಡ್ಡಗಾಡು ಪ್ರದೇಶದಲ್ಲಿ ಮಕ್ಕಳನ್ನು ನಿಧಿಗಾಗಿ ಬಲಿಕೊಡುವಾಗ ಅಲ್ಲಿಗೆ ಬರುವ ಹಿರಿಯ ನಟ ಶಶಿಕುಮಾರ್ ಅವರು ʻʻಅಮಾಯಕರನ್ನು ಕಾಪಾಡಲು ಯುಗಯುಗದಲ್ಲೂ ನಾನು ಅವತಾರವೆತ್ತುತ್ತಲೇ ಬಂದಿದ್ದೇನೆ. ಇನ್ನು ಅವತಾರಗಳಿಲ್ಲ… ಸಂಹಾರವೇ ಎನ್ನುತ್ತಾ ಖಳನಟರಾದ ಬಲರಾಮ್ ಪಂಚಾಲ್.. ಕೋಲಾರ್ ಬಾಲು ,ನಿಡುವಳ್ಳಿ ರೇವಣ್ಣ,ಗುರು ಪ್ರಸನ್ನ ಮೊದಲಾದವರನ್ನು ಸೆದೆಬಡಿಯುವ ಸಾಹಸ ದೃಷ್ಯಗಳ ಮುಕ್ತಾಯದೊಂದಿಗೆ ..ಚಿತ್ರಕ್ಕೆ ಕುಂಬಳ ಕಾಯಿ ಒಡೆಯಲಾಯಿತು.

ಕೋಲಾರ,ಚಿಂತಾಮಣಿ ಅಂತರಗಂಗೆ..ಕೈಲಾಸಗಿರಿ ಮೂದಲಾದ ಸುಂದರ ತಾಣಗಳಲ್ಲಿ ಚಿತ್ರೀಕರಣ ಗೊಂಡ ಪ್ರಚಂಡ ಪುಟಾಣಿಗಳು ಚಿತ್ರದಲ್ಲಿ ಹಿರಿಯ ಕಲಾವಿದರಾದ ಅವಿನಾಶ್, ಶೋಭರಾಜ್, ಶಶಿಕುಮಾರ್ ಬಲರಾಂ ಪಂಚಾಲ್ ರೊಂದಿಗೆ ನರಸಾಪುರ ನಾಗರಾಜ್, ಅಶ್ವಥರೆಡ್ಡಿ, ಕೋಲಾರ್ ಮಂಜುಳ, ಸುಗುಣ, ಶ್ರೀಕಾಂತ್, ಸಂದೀಪ್, ಹನುಮಂತಪ್ಪ, ಬುಲೆಟ್ ರಘು, ರೆಹಮಾನ್, ಜಯಕರ್ನಾಟಕ ತ್ಯಾಗರಾಜ್, ಡ್ಯಾನಿಡಾ ಕೃಷ್ಣಮೂರ್ತಿ, ಲಕ್ಷ್ಮಮ್ಮ ಮದನ್ ಮಂಜು, ಹಾಗು ಪುಟಾಣಿಗಳಾದ ಬೇಬಿ ಸುಪ್ರಿತಾರಾಜ್, ಬೇಬಿ ಅಂಕಿತಾ, ಮಾಸ್ಟರ್ ದೃವ, ಮಾಸ್ಟರ್ ಕ್ರಿತನ್ ,ಮಾಸ್ಟರ್ ಹರ್ಷ, ಬೇಬಿ ಅಂಜಲಿ, ಮಾಸ್ಟರ್ ಆಕಾಶ್, ಮಾಸ್ಟರ್ ನಿಖಿಲ್ ಮಾಸ್ಟರ್ ನಿತಿನ್. ಹಾಗು ಕೋಲಾರದ ಅಂತರಗಂಗೆ ಬುದ್ದಿಮಾಂದ್ಯ ಮಕ್ಕಳ ಅನಾಥಾಶ್ರಮದ 50 ಮಂದಿ ಮಕ್ಕಳು ಪಾಲ್ಗೊಂಡಿದ್ದರು.

ವಿನು ಮನಸು ಸಂಗೀತವಿರುವ ಪ್ರಚಂಡ ಪುಟಾಣಿಗಳು ಚಿತ್ರಕ್ಕೆ ಸುರೇಶ್ ಕಂಬಳಿ ಸಾಹಿತ್ಯ ,ರಾಜೀವ್ ಕೃಷ್ಣರವರ ಕಥೆ -ಚಿತ್ರಕಥೆ- ಸಂಭಾಷಣೆ -ನೃತ್ಯ -ಸಾಹಸ-ಹಾಗು ನಿರ್ಧೇಶನವಿದೆ. ಪ್ರಮೋದ್ ಭಾರತೀಯ ಛಾಯಾಗ್ರಹಣ. ಸಂಜೀವ್ ರಡ್ಡಿ ಸಂಕಲನ ಕೋಲಾರ್ ಸುಮಂತ್ ಸ್ಥಿರಚಿತ್ರಣ..ಸುನಿಲ್ ಕುಮಾರ್ ನಿರ್ಮಾಣ ನಿರ್ವಹಣೆ ಇರುವ ಚಿತ್ರದ ಎಡಿಟಿಂಗ್ ಕಾರ್ಯ ಈಗಾಗಲೇ ಪ್ರಾರಂಭವಾಗಿದ್ದು ಥಿಯೇಟರ್ ಗಳು ತೆರೆದ ತಕ್ಷಣವೇ ಚಿತ್ರವನ್ನು ಬಿಡುಗಡೆ ಮಾಡಲು ಯೋಜನೆ ರೂಪಿಸಿಕೊಂಡಿದೆ.

Click to comment

Leave a Reply

Your email address will not be published. Required fields are marked *

You May Also Like

ಆರೋಗ್ಯ

ಅಂಟುವಾಳ ಕಾಯಿ ಎಲ್ಲರಿಗೂ ಚಿರಪರಿಚಿತ. ಪ್ರಾಚೀನ ಕಾಲದಿಂದಲೂ ಬಟ್ಟೆ ತೊಳೆಯಲು ಹಾಗೂ ಬೆಳ್ಳಿ ಆಭರಣಗಳನ್ನು ತೊಳೆಯಲು ಈ ಕಾಯಿಯನ್ನು ಬಳಸುತ್ತಿದ್ದಾರೆ. ಇದಲ್ಲದೇ ಸೀಗೆ ಕಾಯಿ, ನೆಲ್ಲಿಕಾಯಿ ಕಾಯಿ ಸೇರಿಸಿ ಶಾಂಪೂ ತರಹ ಬಳಸುತ್ತಾರೆ....

ಪ್ರಮುಖ ಸುದ್ದಿ

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

ಪ್ರಮುಖ ಸುದ್ದಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ...

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಪ್ರಮುಖ ಸುದ್ದಿ

ಬೆಂಗಳೂರು :ರಾಜ್ಯದಲ್ಲಿ ಡಿಸೆಂಬರ್‍ವರೆಗೂ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಸಿಎಂ ಹೇಳಿದ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶೀಘ್ರವೇ ಎಸ್.ಎಸ್ ಎಲ್ ಸಿ ಮತ್ತು ದ್ವಿತೀಯ...

ಪ್ರಮುಖ ಸುದ್ದಿ

ಬೆಂಗಳೂರು: ಇಂದು ಶಾಲೆಗಳನ್ನು ಪ್ರಾರಂಭ ಮಾಡುವ ವಿಚಾರಕ್ಕೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಡಿಸೆಂಬರ್ ಅಂತ್ಯದವರೆಗೂ ಶಾಲೆಗಳು ತೆರೆಯುವುದಿಲ್ಲ ಎಂದು ಹೇಳಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ...

ಪ್ರಮುಖ ಸುದ್ದಿ

ಬೆಂಗಳೂರು :ತಜ್ಞರ ಅಭಿಪ್ರಾಯದಂತೆ ಡಿಸೆಂಬರ್‌ವರೆಗೆ ಶಾಲೆ ಪ್ರಾರಂಭಿಸುವುದಿಲ್ಲ ಎಂದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದರು. ಶಾಲಾ-ಕಾಲೇಜು ಪ್ರಾರಂಭ ಕುರಿತು ಸಿಎಂ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಯಿತು. ಸಭೆ...

ಪ್ರಮುಖ ಸುದ್ದಿ

ಬೆಂಗಳೂರು : ಸಂಕಷ್ಟದಲ್ಲಿರುವ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಂದು ಅಖಿಲ ಭಾರತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದ್ದಾರೆ. ದಾಬಸ್ಪೇಟೆಯಲ್ಲಿ ಆಯೋಜಿಸಿದ್ದ ಸಿಐಟಿಯು ಬಹಿರಂಗ ಅಧಿವೇಶನದಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಇಳಿಮುಖ ಕಾಣುತ್ತಿದ್ದರೂ ಸಹ ಶಾಲೆ ಪ್ರಾರಂಭಿಸಲು ಡಿಸೆಂಬರ್ ಸಹ ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು...

error: Content is protected !!