ಸುದ್ದಿಒನ್, ಚಿತ್ರದುರ್ಗ, ಮೇ. 11 :
ಶ್ವಾಸಕೋಶದ ಸೋಂಕು ಹಾಗೂ ಅನಾರೋಗ್ಯದಿಂದ ಭಾನುವಾರ ನಿಧನರಾದ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ಚಳ್ಳಕೆರೆ ಜೈನಧಾಮದಲ್ಲಿ ಸೋಮವಾರ ಸಂಜೆ ನೆರವೇರಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿ ಅಂತಿಮ ನಮನ ಸಲ್ಲಿಸಿದರು.
ಈ ವೇಳೆ ವಿಧಾನ ಸಭೆ ಸಭಾಧ್ಯಕ್ಷ ಯು.ಟಿ.ಖಾದರ್, ಗೃಹ ಸಚಿವ ಜಿ.ಪರಮೇಶ್ವರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಲೋಕೋಪಯೋಗಿ ಸಚಿವ ಸತೀಶ್ ಜಾರಕೀಹೊಳೆ, ಇಂಧನ ಸಚಿವ ಕೆ.ಜೆ.ಜಾರ್ಜ್, ಆಹಾರ ಮತ್ತು ನಾಗರಿಕ ಸರಬಾಜು ಸಚಿವ ಕೆ.ಹೆಚ್.ಮುನಿಯಪ್ಪ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅರಣ್ಯ ಸಚಿವ ಈಶ್ವರ ಖಂಡ್ರೆ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿ ಸಚಿವರು, ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆ ವತಿಯಿಂದ ಮೃತರ ಗೌರವಾರ್ಥ 3ಸುತ್ತಿನ ಕುಶಾಲತೋಪು ಸಿಡಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಒಂದು ನಿಮಿಷದ ಮೌನಾಚರಣೆ ಆಚರಿಸಿಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಧ್ವಜವನ್ನು ಸಚಿವರ ಪತ್ನಿಗೆ ಹಸ್ತಾಂತರಿಸಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















