Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಕ್ಕಲಿಗ ಸಮುದಾಯದಿಂದ ಕಡೆಯ ಎಚ್ಚರಿಕೆ : ಡಿಕೆಶಿಗೆ ಸಿಗುತ್ತಾ ಸಿಎಂ ಪಟ್ಟ..?

ಡಿಕೆ ಶಿವಕುಮಾರ್
---Advertisement---

ಬೆಂಗಳೂರು: ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ ಬಗ್ಗೆ ಜನ ಕುತೂಹಲವಿತ್ತು. ಆದರೆ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿದ ಬೆನ್ನಲ್ಲೇ ರಾಜ್ಯದಲ್ಲಿ ಶುರುವಾದದ್ದು, ಸಿಎಂ ಕುರ್ಚಿ ಕಾದಾಟ. ಸಿದ್ದರಾಮಯ್ಯ ಅವರು ಡಿಕೆಶಿಗೆ ತಮ್ಮ ಕುರ್ಚಿಯನ್ನ ಬಿಟ್ಟು ಕೊಡಬೇಕೆಂದು ಒತ್ತಾಯಗಳು ಕೇಳಿ ಬರ್ತಿವೆ. ಇದೀಗ ಒಕ್ಕಲಿಗ ಸಂಘ ಕೂಡ ಎಚ್ಚರಿಕೆಯನ್ನ ನೀಡಿದೆ. ಅದರಲ್ಲೂ ನಾವೂ ಸಿಡಿದೇಳುವ ಮುನ್ನ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನವನ್ನು ನೀಡಬೇಕೆಂದು ಎಚ್ಚರಿಕೆಯನ್ನ ನೀಡಿದ್ದಾರೆ.

ಒಕ್ಕಲಿಗರ ಸಭೆ ನಡೆದಿದೆ. ಈ ಸಭೆಯಲ್ಲಿ ಸಿಎಂ ಸ್ಥಾನದ ಬಗ್ಗೆಯೂ ಚರ್ಚೆಗಳು ನಡೆದಿವೆ. ಸಭೆ ಬಳಿಕ ಸ್ವಾಮೀಜಿಗಳ ಹೋರಾಟದ ಮುನ್ನವೇ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ನಮ್ಮ ರಾಜ್ಯ ಮಾತ್ರವಲ್ಲ, ಬೇರೆ ರಾಜ್ಯದಲ್ಲಿಯೂ ಪಕ್ಷ ಸಂಘಟನೆ ಮಾಡಿದ್ದಾರೆ. ಡಿಕೆಗೆ ಅನ್ಯಾಯ, ಮೋಸ ಆಗಬಾರದು. ಸ್ವಾಮೀಜಿಗಳ ನೇತೃತ್ವದಲ್ಲಿ ಇಡೀ ರಾಜ್ಯದಲ್ಲಿ ಹೋರಾಟ‌ ಮಾಡ್ತೀವಿ ಎಂದು ಗುಡುಗಿದ್ದಾರೆ.

 

2028ಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಡಿಕೆಶಿ ಸಿಎಂ ಆಗಬೇಕು. ಸಿದ್ದರಾಮಯ್ಯ ಅವರೇ, ನೀವೇ ಡಿಕೆ ಅವರನ್ನು ಸಿಎಂ ಸ್ಥಾನದಲ್ಲಿ ಕೂರಿಸಿ. ಡಿಕೆ ಶಿವಕುಮಾರ್ ಹಿಂದೆ ನಡೆದ ಚುನಾವಣೆ ಪ್ರಚಾರದಲ್ಲಿ ನನ್ನ ಕೈಗೆ ಪೆನ್ನು ಪೇಪರ್ ಕೊಡಿ ಎಂದಿದ್ದರು. ಅವರಿಗೆ ಮತಗಳನ್ನು ಕೊಟ್ಟೆವು. ಅಧ್ಯಕ್ಷರಾಗಿ ಶ್ರಮ ಪಟ್ಟು, ಊಟ ನಿದ್ದೆ ಇಲ್ಲದೆ ಒದ್ದಾಡಿದ್ದಾರೆ. ಸಿದ್ದರಾಮಯ್ಯ ಈ ಹಿಂದೆಯೂ ಅಧಿಕಾರ ಅನುಭವಿಸಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕು ಎಂದು ಒಕ್ಕಲಿಗ ಸಂಘದ ನೂತನ ಅಧ್ಯಕ್ಷ ಎಲ್ ಶ್ರೀನಿವಾಸ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now