Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಳೆ ಪಿಂಚಣಿ ಯೋಜನೆಯಿಂದ ಆರ್ಥಿಕ ಸಂಕಷ್ಟ : ನಿವೃತ್ತ ನೌಕರರ ಸಂಘ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 22 : ಕೇಂದ್ರ ಸರ್ಕಾರ 2004 ರಲ್ಲಿ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿದಾಗ ಎಲ್ಲಾ ರಾಜ್ಯಗಳು ಕೇಂದ್ರ ಸರ್ಕಾರದ ಮಾದರಿಯಂತೆ ಹೊಸದಾಗಿ ಸರ್ಕಾರಿ ನೌಕರಿಗೆ ಸೇರುವವರಿಗೆ ಹೊಸ ಪಿಂಚಣಿ ಯೋಜನೆಯನ್ನು ಜಾರಿಗೆ ತಂದ ಪರಿಣಾಮವಾಗಿ ಸರ್ಕಾರಿ ಸೇವೆಯಿಂದ ನಿವೃತ್ತಿಯಾಗುವವರು ಹಳೆ ಪಿಂಚಣಿ ಯೋಜನೆಯಂತೆ ಆರ್ಥಿಕ ಸೌಲಭ್ಯಗಳಿಂದ ವಂಚಿತರಾಗಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ವೇತನವನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರ ಈಗಾಗಲೆ 8 ನೇ ವೇತನ ಆಯೋಗ ರಚಿಸಿದೆ. ದಿನಾಂಕ : 25-3-2025 ರಂದು ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‍ರವರು ಲೋಕಸಭೆಯಲ್ಲಿ ಬಿಲ್ ಮಂಡಿಸುವಾಗ 1-4-2026 ಮೊದಲು ನಿವೃತ್ತಿಯಾದ ನೌಕರರಿಗೆ ಪಿಂಚಣಿ ಮತ್ತು ಕುಟುಂಬ ಪಿಂಚಣಿಯನ್ನು ಪರಿಷ್ಕರಿಸಲು ಸಾಧ್ಯವಿಲ್ಲ ಎಂಬ ನಿರ್ಣಯ ಕೈಗೊಂಡಿದ್ದಾರೆ. ಇದರಿಂದ ನಿವೃತ್ತ ಸರ್ಕಾರಿ ನೌಕರರು ಹಾಗೂ ಕುಟುಂಬದವರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗುತ್ತಾರೆಂದು ಪ್ರತಿಭಟನಾಕಾರರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು.

ಅಖಿಲ ಭಾರತ ರಾಜ್ಯಗಳ ಪಿಂಚಣಿದಾರರ ಒಕ್ಕೂಟವು ದಿನಾಂಕ : 29-5-2025 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಹೋರಾಟ ನಡೆಸಿ ದೇಶದ ಎಲ್ಲಾ ರಾಜ್ಯಗಳ ನಿವೃತ್ತ ನೌಕರರು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಬೇಕೆಂಬ ನಿರ್ಧಾರ ಕೈಗೊಳ್ಳಲಾಯಿತು. ಅಂದಿನಿಂದ ಇಂದಿನವರೆಗೂ ಸಾಕಷ್ಟು ಮನವಿಗಳನ್ನು ಸಲ್ಲಿಸಿದ್ದರೂ ಸಹ ಕೇಂದ್ರ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದು ಕಷ್ಟ ಎನ್ನುವ ತೀರ್ಮಾನ ತೆಗೆದುಕೊಂಡಿರುವುದರಿಂದ ಸೇವೆಯಿಂದ ನಿವೃತ್ತಿಯಾದವರು ಆರ್ಥಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಪ್ರಧಾನ ಮಂತ್ರಿಗಳನ್ನು ನಮ್ಮ ತೊಂದರೆಗಳನ್ನು ನಿವಾರಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರೇಮನಾಥ್, ಗೌರವಾಧ್ಯಕ್ಷ ಚಂದ್ರಶೇಖರ್, ನಿಕಟಪೂರ್ವ ಅಧ್ಯಕ್ಷ ರಂಗಪ್ಪರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ತಿಮ್ಮಪ್ಪ, ಜೆ.ಪಿ.ಜ್ಞಾನಮೂರ್ತಿ, ಬಿ.ಬಡಮಲ್ಲಪ್ಪ, ಮಂಜುನಾಥ್, ನಿರ್ದೇಶಕ ಪಿ.ನಾಗರಾಜ್ ಹಾಗೂ ಸಂಘಧ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment