ರಾಜ್ಯದ ಹಿರಿಯ ನಾಗರಿಕರು ಇಳಿವಯಸ್ಸಿನಲ್ಲಿ ಗೌರವಯುತ ಹಾಗೂ ಸ್ವಾವಲಂಬಿ ಜೀವನ ನಡೆಸಲು ಸಹಾಯವಾಗುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಸಂಧ್ಯಾ ಸುರಕ್ಷಾ ಯೋಜನೆ’ಯನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವೃದ್ಧರಿಗೆ ಈ ಯೋಜನೆ ಭದ್ರತಾ ಕವಚವಾಗಿ ಪರಿಣಮಿಸಿದ್ದು, ಮಾಸಿಕ ಪಿಂಚಣಿಯ ಜೊತೆಗೆ ಹಲವು ಸೌಲಭ್ಯಗಳನ್ನು ಒದಗಿಸುತ್ತದೆ.
ಈ ಯೋಜನೆಯಡಿ ಅರ್ಹರಿಗೆ ಪ್ರತಿಮಾಸ ₹1200 ಪಿಂಚಣಿಯನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಜೊತೆಗೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವೂ ಲಭ್ಯವಿದೆ. ಆರೋಗ್ಯದ ದೃಷ್ಟಿಯಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಉಚಿತ ವೈದ್ಯಕೀಯ ತಪಾಸಣೆ ಮತ್ತು ಔಷಧ ಖರೀದಿಯಲ್ಲಿ ರಿಯಾಯಿತಿಯನ್ನೂ ಒದಗಿಸಲಾಗುತ್ತಿದೆ.
ಯೋಜನೆಯ ಲಾಭ ಪಡೆಯಲು ಅರ್ಜಿದಾರರು ಕನಿಷ್ಠ 65 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ವಾರ್ಷಿಕ ಆದಾಯ ₹20,000 ಕ್ಕಿಂತ ಕಡಿಮೆ ಇರಬೇಕು ಮತ್ತು ಬೇರೆ ಯಾವುದೇ ಪಿಂಚಣಿ ಸೌಲಭ್ಯ ಪಡೆಯುತ್ತಿರಬಾರದು ಎಂಬ ನಿಯಮವೂ ಇದೆ.
ಅರ್ಜಿ ಸಲ್ಲಿಸಲು ಹತ್ತಿರದ ನಾಡಕಚೇರಿ ಅಥವಾ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಹಾಕಬಹುದು. ಅಗತ್ಯ ದಾಖಲೆಗಳಾಗಿ ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ, ಆದಾಯ ಪ್ರಮಾಣಪತ್ರ, ವಾಸಸ್ಥಳದ ಪುರಾವೆ ಮತ್ತು ಬ್ಯಾಂಕ್ ಪಾಸ್‌ಬುಕ್ ಪ್ರತಿಗಳನ್ನು ಸಲ್ಲಿಸಬೇಕು.ರಾಜ್ಯ ಸರ್ಕಾರದ ಈ ಯೋಜನೆ ಆರ್ಥಿಕ ಸಂಕಷ್ಟದಲ್ಲಿರುವ ಸಾವಿರಾರು ಹಿರಿಯ ನಾಗರಿಕರಿಗೆ ನೆರವಾಗುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಆಡಳಿತ ಕಚೇರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











