Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮನೆ ಕಸವನ್ನು ಬೀದಿಗೆ ತಂದು ಸುರಿಯುವ ಸಾರ್ವಜನಿಕರಿಗೆ ದಂಡ ವಿಧಿಸಿ : ಕರುನಾಡ ವಿಜಯಸೇನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್. 26 ಸಾರ್ವಜನಿಕರು ತಮ್ಮ ಮನೆಯ ಕಸವನ್ನು ಬೀದಿಗೆ ತಂದು ಸುರಿದು ಪರಿಸರ ಹಾಳು ಮಾಡುತ್ತಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಚಂದ್ರವಳ್ಳಿ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಸ್ವತಃ ಕಸವನ್ನು ತುಂಬಿ ನಗರಸಭೆ ಲಾರಿಯಲ್ಲಿ ಹಾಕುವ ಮೂಲಕ ಪ್ರತಿಭಟನೆ ನಡೆಸಿ ಪರಿಸರವನ್ನು ಕಲುಷಿತಗೊಳಿಸದಂತೆ ಜನತೆಯಲ್ಲಿ ಮನವಿ ಮಾಡಲಾಯಿತು.

ದಿನನಿತ್ಯವೂ ಇದೇ ಮಾರ್ಗವಾಗಿ ವಾಯುವಿಹಾರಕ್ಕೆ ತೆರಳುವವರಿಗೆ ಸುತ್ತಲಿನ ಗಲೀಜು ಪರಿಸರ ಅಸಹ್ಯವೆನಿಸುತ್ತದೆ. ನಗರಸಭೆ ವಾಹನಗಳು ಪ್ರತಿ ನಿತ್ಯವೂ ಜನಸಾಮಾನ್ಯರ ಮನೆ ಬಾಗಿಲಿಗೆ ಹೋದರು ಸಹ ಕೆಲವರು ಹಸಿಕಸ ಹಾಗೂ ಒಣಕಸವನ್ನು ತಂದು ರಸ್ತೆಗೆ ಸುರಿಯುತ್ತಿದ್ದಾರೆ. ಇಂತಹವರಿಗೆ ದಂಡ ವಿಧಿಸಬೇಕು. ಇಲ್ಲವೇ ದೂರು ಸಲ್ಲಿಸುವ ಕೆಲಸವಾಗಬೇಕು ಎಂದು ಪ್ರತಿಭಟನಾಕಾರರು ನಗರಸಭೆ, ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಐತಿಹಾಸಿಕ ಚಿತ್ರದುರ್ಗ ಕೋಟೆ ಪ್ರವಾಸಿ ತಾಣಕ್ಕೆ ಹೆಸರುವಾಸಿಯಾಗಿರುವಂತೆ ಚಂದ್ರವಳ್ಳಿ, ಆಡುಮಲ್ಲೇಶ್ವರ, ಜೋಗಿಮಟ್ಟಿ ಗಿರಿಧಾಮ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಇಂತಹ ಊರನ್ನು ಸ್ವಚ್ಚವಾಗಿಡುವುದು ಸಾರ್ವಜನಿಕರ ಜವಾಬ್ದಾರಿ. ಜೊತೆಗೆ ಜಿಲ್ಲಾಡಳಿತ, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟೆಚ್ಚರ ವಹಿಸಿ ಊರಿನ ಸೌಂದರ್ಯ ಹಾಳು ಮಾಡುವವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಲ್ಲದೆ ಚಂದ್ರವಳ್ಳಿ ಕ್ರಾಸ್‍ನಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿ ನಗರಸಭೆ ಹೆಲ್ತ್ ಇನ್ಸ್‍ಪೆಕ್ಟರ್ ನಿರ್ಮಲರವರಿಗೆ ಮನವಿ ಸಲ್ಲಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷ ಮುಜಾಹಿದ್, ಶಶಿಧರ, ನಾಗೇಶ್, ವಿಜಯಬಾಬು, ನಿಸಾರ್‍ಅಹಮದ್, ಹರೀಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...