ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 26 ಸಾರ್ವಜನಿಕರು ತಮ್ಮ ಮನೆಯ ಕಸವನ್ನು ಬೀದಿಗೆ ತಂದು ಸುರಿದು ಪರಿಸರ ಹಾಳು ಮಾಡುತ್ತಿರುವುದನ್ನು ಖಂಡಿಸಿ ಕರುನಾಡ ವಿಜಯಸೇನೆಯಿಂದ ಚಂದ್ರವಳ್ಳಿ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಸ್ವತಃ ಕಸವನ್ನು ತುಂಬಿ ನಗರಸಭೆ ಲಾರಿಯಲ್ಲಿ ಹಾಕುವ ಮೂಲಕ ಪ್ರತಿಭಟನೆ ನಡೆಸಿ ಪರಿಸರವನ್ನು ಕಲುಷಿತಗೊಳಿಸದಂತೆ ಜನತೆಯಲ್ಲಿ ಮನವಿ ಮಾಡಲಾಯಿತು.
ದಿನನಿತ್ಯವೂ ಇದೇ ಮಾರ್ಗವಾಗಿ ವಾಯುವಿಹಾರಕ್ಕೆ ತೆರಳುವವರಿಗೆ ಸುತ್ತಲಿನ ಗಲೀಜು ಪರಿಸರ ಅಸಹ್ಯವೆನಿಸುತ್ತದೆ. ನಗರಸಭೆ ವಾಹನಗಳು ಪ್ರತಿ ನಿತ್ಯವೂ ಜನಸಾಮಾನ್ಯರ ಮನೆ ಬಾಗಿಲಿಗೆ ಹೋದರು ಸಹ ಕೆಲವರು ಹಸಿಕಸ ಹಾಗೂ ಒಣಕಸವನ್ನು ತಂದು ರಸ್ತೆಗೆ ಸುರಿಯುತ್ತಿದ್ದಾರೆ. ಇಂತಹವರಿಗೆ ದಂಡ ವಿಧಿಸಬೇಕು. ಇಲ್ಲವೇ ದೂರು ಸಲ್ಲಿಸುವ ಕೆಲಸವಾಗಬೇಕು ಎಂದು ಪ್ರತಿಭಟನಾಕಾರರು ನಗರಸಭೆ, ಜಿಲ್ಲಾಡಳಿತವನ್ನು ಒತ್ತಾಯಿಸಿದರು.
ಐತಿಹಾಸಿಕ ಚಿತ್ರದುರ್ಗ ಕೋಟೆ ಪ್ರವಾಸಿ ತಾಣಕ್ಕೆ ಹೆಸರುವಾಸಿಯಾಗಿರುವಂತೆ ಚಂದ್ರವಳ್ಳಿ, ಆಡುಮಲ್ಲೇಶ್ವರ, ಜೋಗಿಮಟ್ಟಿ ಗಿರಿಧಾಮ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಇಂತಹ ಊರನ್ನು ಸ್ವಚ್ಚವಾಗಿಡುವುದು ಸಾರ್ವಜನಿಕರ ಜವಾಬ್ದಾರಿ. ಜೊತೆಗೆ ಜಿಲ್ಲಾಡಳಿತ, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟೆಚ್ಚರ ವಹಿಸಿ ಊರಿನ ಸೌಂದರ್ಯ ಹಾಳು ಮಾಡುವವರ ವಿರುದ್ದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಲ್ಲದೆ ಚಂದ್ರವಳ್ಳಿ ಕ್ರಾಸ್‍ನಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸುವಂತೆ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಒತ್ತಾಯಿಸಿ ನಗರಸಭೆ ಹೆಲ್ತ್ ಇನ್ಸ್‍ಪೆಕ್ಟರ್ ನಿರ್ಮಲರವರಿಗೆ ಮನವಿ ಸಲ್ಲಿಸಿದರು.
ಕರುನಾಡ ವಿಜಯಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಉಪಾಧ್ಯಕ್ಷ ಮುಜಾಹಿದ್, ಶಶಿಧರ, ನಾಗೇಶ್, ವಿಜಯಬಾಬು, ನಿಸಾರ್‍ಅಹಮದ್, ಹರೀಶ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















