ಕೊಪ್ಪಳ: ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದೆ. ಇನ್ನು ಫಲಿತಾಂಶಕ್ಕೆ ಇನ್ನು ಒಂದು ದಿನ ಕಾಯಲೇಬೇಕಾಗಿದೆ. ಮತದಾರರ ಒಲವು ಯಾರ ಕಡೆಗೆ ಎಂಬುದು ಗೊತ್ತಾಗಲಿದೆ. ಈ ಮಧ್ಯೆ ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಜನಾರ್ದನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಕಣಕ್ಕೆ ಇಳಿದಿದ್ದಾರೆ. ಆದರೆ ನಿನ್ನೆ ಮತದಾನ ನಡೆಯುವಾಗ ಮತಗಟ್ಟೆ ಬಳಿ ಪ್ರಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಜನಾರ್ದನ ರೆಡ್ಡಿ ವಿರುದ್ಧ ಗಂಗಾವತಿಯಲ್ಲಿ ಎಫ್ಐಆರ್ ದಾಖಲಾಗಿದೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜನಾರ್ದನ ರೆಡ್ಡಿಗೆ ಸಂಬಂಧಿಸಿದ ಒಂದು ವಾಹನವನ್ನು ಜಪ್ತಿ ಮಾಡಿದ್ದಾರೆ. ಲಕ್ಷ್ಮೀ ಕ್ಯಾಂಪ್ ನ ನಿಷೇಧಿತ ಪ್ರದೇಶದಲ್ಲಿ ಪ್ರಚಾರ ಮಾಡಿದ್ದಾರೆ ಎಂದು ಚುನಾವಣಾಧಿಕಾರಿ ಆರೋಪ ಮಾಡಿ, ದೂರು ನೀಡಿದ್ದಾರೆ. ಇದರ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.