Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ `FIR’ ದಾಖಲು

---Advertisement---

 

ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧ ಅವಹೇಳನಕಾರಿ  ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

ಗಾಂಧೀಜಿಯನ್ನ ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳಲ್ಲ. ಗಾಂಧಿ ಪಾಕಿಸ್ತಾನಕ್ಕೆ ರಾಷ್ಟ್ರಪಿತ ಹಾಗೂ ಜವಾಹರ್ಲಾಲ್ ನೆಹರೂರನ್ನ ಮೊದಲ ಪ್ರಧಾನಿ ಎಂದು ಒಪ್ಪಿಕೊಳ್ಳಲ್ಲ ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಷ್ ಚಂದ್ರ ಬೋಸ್. ಫಾರೂಕ್ ಅಬ್ದುಲ್ಲಗೆ ಜವಾಹರಲಾಲ್ ನೆಹರುಗೆ ಲಿಂಕ್ ಇತ್ತು. ಅದಕ್ಕೆ ರಾಹುಲ್ ಗಾಂಧಿ ಮತ್ತು ಓಮರ್ ಅಬ್ದುಲ್ಲ ಒಂದೇ ತರಹ ಇದ್ದಾರೆ.

ಇವರೆಲ್ಲರೂ ದೇಶದ ಸ್ವತಂತ್ರಕ್ಕಾಗಿ ಉಪವಾಸ ಮಾಡುತ್ತಿರಲಿಲ್ಲ. ಕೊಲ್ಕತ್ತಾದಿಂದ 555 ಸಿಗರೇಟ್ ತರಿಸಿಕೊಂಡು ಸೇದುತ್ತಿದ್ದರು. ಗಾಂಧೀ ಚರಕ ತಿರುಗಿಸಿದ್ದರಿಂದ ಭಾರತಕ್ಕೆ ಸ್ವತಂತ್ರ ಸಿಕ್ಕಿತ? ನಾನು ಚರಕ ತಿರುಗಿಸುತ್ತೇನೆ ನಾಳೆ ರಾಜ್ಯದ ಸಿಎಂ ಆಗುತ್ತೇನ? ಎಂದು ಯತ್ನಾಳ ಪ್ರಶ್ನಿಸಿದ್ದರು.

ಗುರುಮಠಕಲ್ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 196: ವಿವಿಧ ಗುಂಪುಗಳ ನಡುವೆ ದ್ವೇಷ ಉಂಟುಮಾಡುವುದು. ಸೆಕ್ಷನ್ 299: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು. ಸೆಕ್ಷನ್ 302, 352, 353: ಸಾರ್ವಜನಿಕ ಶಾಂತಿಗೆ ಭಂಗ ಹಾಗೂ ಇತರ ಕೃತ್ಯಗಳು.ಸದ್ಯ ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...