ಬಾರಿ ಅಗ್ನಿ ದುರಂತ : 46 ಮಂದಿ ಸಜೀವ ದಹನ

suddionenews
1 Min Read

ತೈವಾನ್: ತೈವಾನ್ ನಲ್ಲಿ ಬಾರಿ ದುರಂತ ಸಂಭವಿಸಿದೆ. ಗುರುವಾರ ಮುಂಜಾನೆ ಸಂಭವಿಸಿದ ಈ ಅಗ್ನಿ ದುರಂತದಲ್ಲಿ 46 ಜನರು ಸಜೀವವಾಗಿ ದಹನವಾಗಿದ್ದಾರೆ. 79 ಮಂದಿ ಗಂಭೀರವಾಗಿ ಗಾಯಗೊಂಡಿದ್ದು,  ಈ ಪೈಕಿ 14 ಜನರ ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ತೈವಾನ್ ನ ಕೌಹ್ಸಿಯುಂಗ್ ನಗರದ 13 ಅಂತಸ್ತಿನ ಟವರ್ ಬ್ಲಾಕ್ ನಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಸ್ಥಳೀಯ ಅಗ್ನಿಶಾಮಕ ಇಲಾಖೆ ತಿಳಿಸಿದೆ. 46 ಜನರು ಬೆಂಕಿಯಲ್ಲಿ ಸಿಲುಕಿಕೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಕ್ಷಣಾ ತಂಡದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿ, ಅಗ್ನಿ ಅವಘಡದಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದರು. ಬೆಂಕಿಯು ಹೊತ್ತಿಕೊಳ್ಳುವ ಮೊದಲು ಬಾಯ ಸ್ಫೋಟ ಕೇಳಿಸಿತು ಎಂದು ಹತ್ತಿರದ ನಿವಾಸಿಗಳು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಶ್ರಮಿಸಬೇಕಾಯಿತು ಎಂದು ಅಗ್ನಿಶಾಮಕ ಸಿಬ್ಬಂದಿ ಹೇಳಿದ್ದಾರೆ ಮತ್ತು ಕಟ್ಟಡದ ಕೆಳಗಿನ ಮಹಡಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಈ ಅಪಘಾತಕ್ಕೆ ನಿಖರವಾದ  ಕಾರಣ ತಿಳಿದು ಬಂದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *