Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಗ್ನಿ ಸುರಕ್ಷತಾ ಅಣುಕು ಪ್ರದರ್ಶನ : ಅಗ್ನಿ ಅವಘಡಗಳ ನಿರ್ವಹಣೆ ಕುರಿತು ತರಬೇತಿ

---Advertisement---

ಸುದ್ದಿಒನ್, ಚಿತ್ರದುರ್ಗ, ಜು.02: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಗುರುವಾರ ನಗರದ ಕೈಗಾರಿಕಾ ಪ್ರದೇಶದ ಖಾಧಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆ ಆಯೋಗದ ಕೇಂದ್ರೀಯ ಸಿಲ್ವರ್ ಪ್ಲಾಂಟ್‌ನಲ್ಲಿ ಅಗ್ನಿ ಸುರಕ್ಷತಾ ಪ್ರಾತ್ಯಕ್ಷತೆ ಹಾಗೂ ಅಣಕು ಪ್ರದರ್ಶನ ನಡೆಸಲಾಯಿತು.

ಈ ವೇಳೆ ಕೈಗಾರಿಕೆಗಳಲ್ಲಿ ಅಗ್ನಿ ಅವಘಡಗಳು ಸಂಭವಿಸಿದಾಗ ಕೈಗೊಳ್ಳಬೇಕಾದ ತುರ್ತು ಸ್ಪಂದನೆ ಕಾರ್ಯಗಳು, ಕೈಗಾರಿಕೆಗಳಲ್ಲಿರುವ ಅಗ್ನಿಶಾಮಕ ಉಪಕರಣಗಳ ಬಳಕೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯೊಂದಿಗೆ ಹೇಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಕಾರ್ಮಿಕರಿಗೆ ತರಬೇತಿ ನೀಡಲಾಯಿತು.

ಅಗ್ನಿ ದುರಂತದಲ್ಲಿ ಸಿಲುಕಿದ ಗಾಯಾಳುಗಳ ರಕ್ಷಣೆ ಹಾಗೂ ಪ್ರಥಮ ಚಿಕಿತ್ಸಾ ಕಾರ್ಯಗಳ ಬಗ್ಗೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಎಸ್.ಡಿ.ಆರ್.ಎಫ್ ಹಾಗೂ ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಅಣಕು ಪ್ರದರ್ಶನ ನೀಡಲಾಯಿತು.

ಈ ವೇಳೆ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸೋಮಶೇಖರ್ ವ್ಹಿ ಅಗಡಿ, ಅಗ್ನಿಶಾಮಕ ಠಾಣಾಧಿಕಾರಿ ನರೇಂದ್ರ, ಎಸ್.ಡಿ.ಆರ್.ಎಫ್ ಸಬ್ ಇನ್ಸಪೆಕ್ಟರ್ ಇಮ್ರಾನ್ ಖುರೇಶಿ, ಖಾಧಿ ಮತ್ತು ಗ್ರಾಮೋದ್ಯೋಗ ಕೈಗಾರಿಕೆ ಆಯೋಗದ ಕೇಂದ್ರೀಯ ಸಿಲ್ವರ್ ಪ್ಲಾಂಟ್‌ನ ಮಾಲತಿ ಮತ್ತು ಶಶಿಕಲ ಹಾಗೂ ಕಾರ್ಮಿಕರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now