Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಪ್ರಸಿದ್ಧ ಬೆಣ್ಣೆ ದೋಸೆ ಹೋಟೆಲ್ ನಲ್ಲಿ ಅಗ್ನಿ ದುರಂತ

---Advertisement---

ಸುದ್ದಿಒನ್, ದಾವಣಗೆರೆ, ಫೆಬ್ರವರಿ. 22 : ನಗರದ ಪ್ರಸಿದ್ಧ ಬೆಣ್ಣೆ ದೋಸೆಗಾಗಿ ಹೆಸರು ಪಡೆದಿದ್ದ ಶ್ರೀ ಕೊಟ್ಟೂರೇಶ್ವರ ಹೋಟೆಲ್ ನಲ್ಲಿ  ಭಾರೀ ಅಗ್ನಿ ಅವಘಡ  ಸಂಭವಿಸಿದ್ದು, ಹೋಟೆಲ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ದಾವಣಗೆರೆಯ ಬಾಪೂಜಿ ಡೆಂಟಲ್ ಕಾಲೇಜು ಸಮೀಪ ಈ ದುರ್ಘಟನೆ ನಡೆದಿದೆ.

ಹೋಟೆಲ್ ರಾತ್ರಿ ವೇಳೆ ಮುಚ್ಚಲಾಗಿದ್ದರಿಂದ ಘಟನೆ ಸಂಭವಿಸಿದ ಸಮಯದಲ್ಲಿ ಒಳಗೆ ಯಾರೂ ಇಲ್ಲದಿರುವುದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಹೋಟೆಲ್‌ನಲ್ಲಿದ್ದ ಅಡುಗೆ ಸಾಮಗ್ರಿಗಳು, ಫರ್ನಿಚರ್, ಎಲೆಕ್ಟ್ರಾನಿಕ್ ಉಪಕರಣಗಳು ಸೇರಿದಂತೆ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.

ದಾವಣಗೆರೆ ನಗರದ ಅತ್ಯಂತ ಹಳೆಯ ಮತ್ತು ಜನಪ್ರಿಯ ಹೋಟೆಲ್‌ಗಳಲ್ಲಿ ಒಂದಾಗಿದ್ದ ಈ ಹೋಟೆಲ್,  ಬೆಣ್ಣೆ ದೋಸೆಯಿಂದ  ಜನರ ಮನಸ್ಸು ಗೆದ್ದಿತ್ತು. ದಶಕಗಳಿಂದ ಗ್ರಾಹಕರ ವಿಶ್ವಾಸ ಗಳಿಸಿದ್ದ ಈ ಹೋಟೆಲ್ ಇಂದಿನ ಬೆಂಕಿ ಅವಘಡದಿಂದ ಸಂಪೂರ್ಣವಾಗಿ ನಾಶವಾಗಿ ಹೋಗಿದೆ. ಬೆಂಕಿ ಕಾಣಿಸಿಕೊಂಡ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಗ್ಯಾಸ್ ಲೀಕೆಜ್ ಕಾರಣವಾಗಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ಹಾಗೂ ಸಂಬಂಧಿತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!

ಮೊಬೈಲ್‌-ಸ್ಕ್ರೀನ್‌ಗೆ ಬ್ರೇಕ್ ನೀಡಿ: ಮಾನಸಿಕ ಆರೋಗ್ಯ ಕಾಪಾಡಲು ‘ಡಿಜಿಟಲ್ ಡಿಟಾಕ್ಸ್’ ಏಕೆ ಮುಖ್ಯ?

ನೀತಿ ಕಥೆ: ನಂಬಿಕೆದ್ರೋಹಕ್ಕೆ ಕ್ಷಮೆಯಿಲ್ಲ (ಯುವರಾಜ ಮತ್ತು ಕರಡಿಯ ಕಥೆ)