ಸುದ್ದಿಒನ್, ಚಿತ್ರದುರ್ಗ, ಜನವರಿ. 20 : ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿ ತಿಂಗಳಲ್ಲಿ ಹೊಳಲ್ಕೆರೆಯಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಮ್ಮೇಳನಾಧ್ಯಕ್ಷರನ್ನಾಗಿ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯನ್ನು ಆಯ್ಕೆ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ. ಸಾಹಿತ್ಯ, ಕಲೆ, ಸಂಸ್ಕøತಿ, ನೃತ್ಯ, ಜಾನಪದ, ಭಾಷಾ ಪ್ರಯೋಗ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಹೆಸರುಗಳನ್ನು ಸಾರ್ವಜನಿಕರು, ಶಿಕ್ಷಕರು, ಪೋಷಕರು, ಸಾಹಿತ್ಯಾಭಿಮಾನಿಗಳು ಪ್ರಸ್ತಾವನೆಗಳನ್ನು ನೀಡಬಹುದಾಗಿದೆ. ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಸರಕಾರಿ / ಅನುದಾನಿತ/ಅನುದಾನರಹಿತ ಶಾಲೆ/ಕಾಲೇಜುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರಾಗಿರುತ್ತಾರೆ.
ಪ್ರಥಮ ಪಿಯುಸಿ ಮತ್ತು ಅದಕ್ಕಿಂತ ಕಡಿಮೆ ತರಗತಿಯಲ್ಲಿ ಓದುವ ವಿದ್ಯಾರ್ಥಿಗಳನ್ನು ಸೂಚಿಸಬಹುದಾಗಿದೆ. ಅಂಥಹ ವಿದ್ಯಾರ್ಥಿಗಳ ಹೆಸರು, ವಿಳಾಸ ಮತ್ತು ಸಾಧನೆಯ ಅಂಶಗಳ ವಿವರಗಳನ್ನು ನೀಡಬಹುದಾಗಿದೆ. ನಾಮನಿದೇಶನದ ನಂತರ ಬಂದ ಹೆಸರುಗಳಲ್ಲಿ ಒಬ್ಬರನ್ನು ಸಾಹಿತಿಗಳು ನಿರ್ಧರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗೆ ಮತ್ತು ನಾಮನಿರ್ದೇಶನವನ್ನು ಜನವರಿ 26 ರ ಒಳಗೆ ನೀಡಲು ಕೋರಿದೆ. ವಿಳಾಸ :- ಎನ್.ಶಿವಮೂರ್ತಿ, ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು. ಕನ್ನಡ ಭವನ, ಸರಕಾರಿ ಆಸ್ಪತ್ರೆ ಪಕ್ಕ, ಹೊಳಲ್ಕೆರೆ. ಪೋನ್. 9980383294
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















