ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.08 : ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಎಸ್. ಆರ್. ಎಸ್. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಚಿತ್ರದುರ್ಗ ತಾಲೂಕಿನ 53 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯಲಕ್ಷ್ಮಿ ಭಾಸಗಿ ಮತ್ತು ಭೂಮಿಕಾ ಡಿ.ಎಂ. “ತ್ಯಾಜ್ಯ ಕಾಗದದಿಂದ ಹೊಸ ಕಾಗದವನ್ನು ತಯಾರಿಸುವ ವಿಧಾನದ” ಪ್ರಾಜೆಕ್ಟ್ ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಮತ್ತು ಅವರನ್ನು ತರಬೇತುಗೊಳಿಸಿದ ಶಾಲೆಯ ಶಿಕ್ಷಕರಾದ ರಾಘವೇಂದ್ರರವರಿಗೆ ಎಸ್. ಆರ್. ಎಸ್. ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷರಾದ ಬಿ. ಎ. ಲಿಂಗಾರೆಡ್ಡಿರವರು, ಕಾರ್ಯದರ್ಶಿಗಳಾದ ಶ್ರೀಮತಿ ಪಿ. ಸುಜಾತಾ ಲಿಂಗಾರೆಡ್ಡಿರವರು ಮತ್ತು
ಉಪಾಧ್ಯಕ್ಷರಾದ ಬಿ. ಎಲ್. ಅಮೋಘರವರು ಅಭಿನಂದನೆಗಳನ್ನು ತಿಳಿಸುವುದರ ಜೊತೆಗೆ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಯಶಸ್ಸುಗಳಿಸಲೆಂದು ಹಾರೈಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















